ಕರ್ತವ್ಯನಿರತ ಕಾನ್‌ಸ್ಟೆಬಲ್‌ಗೆ ಅವಾಚ್ಯ ನಿಂದನೆ, ಹಲ್ಲೆ ಯತ್ನ: ಜೆಡಿಎಸ್‌ ‌ಮುಖಂಡ ಮಂಜುನಾಥ್ ವಿರುದ್ಧ ಎಫ್‌ಐಆರ್

Date:

ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್‌ವೋರ್ವರನ್ನು ತಡೆದು ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಜನತಾ ದಳ(ಜಾತ್ಯತೀತ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ಎಂಬವರ ವಿರುದ್ಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

- Advertisement -

ಭಾನುವಾರ ಸಂಜೆ ಹುಳಿಮಾವು ಜಂಕ್ಷನ್ ಬಳಿ ಘಟನೆ ನಡೆದಿದ್ದು, ಸಂಚಾರ ಠಾಣೆ ಕಾನ್‌ಸ್ಟೆಬಲ್ ಅರುಣ್ ಮಂಜಪ್ಪ ಅವರು ನೀಡಿರುವ ದೂರಿನನ್ವಯ ಜೆಡಿಎಸ್‌ ‌ಮುಖಂಡ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಭಾನುವಾರ ಸಂಜೆ 4ರ ಸುಮಾರಿಗೆ ಠಾಣೆಯ ಸಮೀಪದ ಗೊಟ್ಟಿಗೆರೆ ಜಂಕ್ಷನ್ ಬಳಿ ಕಾನ್ಸ್‌ಟೆಬಲ್ ಅರುಣ್ ಅವರು ಸಂಚಾರ ಸುಗಮಗೊಳಿಸುತ್ತಿದ್ದರು. ಆ ಸಂದರ್ಭದಲ್ಲಿ ಎದುರಿನ ಮಾರ್ಗದ ವಾಹನಗಳಿಗೆ ದಾರಿ ಮಾಡಿಕೊಡಲು ಅರುಣ್ ಕೈಸನ್ನೆ ಮೂಲಕ ಮಂಜುನಾಥ್ ಅವರ ವಾಹನವನ್ನು ತಡೆದಿದ್ದಾರೆ. ಇದರಿಂದ ಕೆರಳಿದ ಮಂಜುನಾಥ್, ತಮ್ಮ ಸಹಾಯಕರೊಂದಿಗೆ ಬಂದು ಕಾನ್‌ಸ್ಟೆಬಲ್ ಅರುಣ್ ಅವರನ್ನು ನಿಂದಿಸಿದ್ದಾರೆ. ಅಲ್ಲದೇ ಅವರ ಕೈಗಳನ್ನು ಹಿಡಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ಬಳಿಕ ಮಂಜುನಾಥ್ ಅವರು ಹಿರಿಯ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಧಿಕಾರಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿರುವಾಗಲೇ ಮಂಜುನಾಥ್ ಅವರು ಕಾನ್‌ಸ್ಟೆಬಲ್‌ಗೆ ಒದೆಯಲು ಯತ್ನಿಸುತ್ತಿರುವುದು ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಹುಳಿಮಾವು ಸಂಚಾರ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನೈಸ್ ರಸ್ತೆ ಹೆಸರಲ್ಲಿ ಟೋಲ್ ಲೂಟಿ: ಸರ್ಕಾರ ರಸ್ತೆ ವಶಪಡಿಸಿಕೊಳ್ಳಲು ಆಗ್ರಹಿಸಿ ಸಿಎಂಗೆ ಎಚ್‌ಡಿಕೆ ಪತ್ರ

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ಉತ್ನದ ಆರೋಪದಡಿಯಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...