ಜಿಬಿಎ ಚುನಾವಣೆ ಮತ್ತೆ ಮುಂದಕ್ಕೆ: ‘ಎಸ್ಐಆರ್’ ಕಾರಣ ನೀಡಿ ಸುಪ್ರೀಂ ಕೋರ್ಟ್ ಮೊರೆ

Date:

ಬೆಂಗಳೂರಿನ ಐದು ಪಾಲಿಕೆಗಳಿಗೆ ನಡೆಯಬೇಕಿರುವ ಚುನಾವಣೆಯನ್ನು ಮತ್ತೆ ಮುಂದೂಡಲು ಸರ್ಕಾರ ಸಿದ್ಧತೆ ನಡೆಸಿದೆ. ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಕಾರ್ಯ ನಡೆಯುತ್ತಿರುವುದರಿಂದ, ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

- Advertisement -

ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿದ್ದು, ಅಂದಿನಿಂದ ಆಡಳಿತಾಧಿಕಾರಿಗಳ ಆಡಳಿತವೇ ಮುಂದುವರಿದಿದೆ. ಆರಂಭದಲ್ಲಿ ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಚುನಾವಣೆ ನಡೆಸಲು ನಿರ್ದೇಶನ ನೀಡಿತ್ತು. ಬಳಿಕ ರಾಜ್ಯ ಸರ್ಕಾರದ ಮನವಿ ಮೇರೆಗೆ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮೇ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಿ, ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸುವಂತೆ ಜಿಬಿಎ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವುದು ಚುನಾವಣೆ ಮುಂದೂಡಿಕೆಗೆ ಪ್ರಮುಖ ಕಾರಣವಾಗಿದೆ. ಎಸ್‌ಎಸ್‌ಆರ್ ಮತ್ತು ಪಾಲಿಕೆ ಚುನಾವಣೆ ಎರಡನ್ನೂ ಏಕಕಾಲದಲ್ಲಿ ನಡೆಸುವುದು ಕಷ್ಟಕರ ಎಂದು ಜಿಬಿಎ ಮತ್ತು ರಾಜ್ಯ ಚುನಾವಣಾ ಆಯೋಗ ತಿಳಿಸಿವೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ತೊಡಗಿರುವ ಬಿಎಲ್‌ಒ ಹಾಗೂ ಇತರ ಅಧಿಕಾರಿಗಳನ್ನೇ ಚುನಾವಣೆಗೂ ಬಳಸಿಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಸಿಬ್ಬಂದಿ ಕೊರತೆ ಎದುರಾಗಲಿದೆ. ಅಲ್ಲದೆ, ಮತದಾನದ ದಿನಾಂಕದಂದು ಗರಿಷ್ಠ 60 ಸಾವಿರ ಸಿಬ್ಬಂದಿಗಳ ಅಗತ್ಯವಿದ್ದು, ಇದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಾಗುತ್ತದೆ. ದೋಷರಹಿತ ಮತದಾರರ ಪಟ್ಟಿ ಪ್ರಕಟವಾಗುವ ಮೊದಲು ಚುನಾವಣೆ ನಡೆಸುವುದು ಪ್ರಜಾಪ್ರಭುತ್ವ ಪ್ರಕ್ರಿಯೆಯ ಸಮಗ್ರತೆಗೆ ಹಾನಿ ಉಂಟುಮಾಡುತ್ತದೆ ಎಂದು ಪ್ರಾಧಿಕಾರ ನ್ಯಾಯಾಲಯದ ಮುಂದೆ ವಾದಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಪ್ರಮುಖ ದಿನಾಂಕಗಳನ್ನು ಗಮನಿಸುವುದಾದರೆ, ಜುಲೈ 29 ಬಿಎಲ್‌ಒ ಗಳು ಮನೆ ಮನೆಗೆ ಭೇಟಿ ನೀಡಿ ಅರ್ಜಿ ನಮೂನೆ ನೀಡಲು ಕಡೆಯ ದಿನವಾಗಿದೆ ಮತ್ತು ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ತದನಂತರ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 4 ಕಡೆಯ ದಿನವಾಗಿದ್ದು, ಅಕ್ಟೋಬರ್ 3 ರೊಳಗೆ ಚುನಾವಣಾ ಅಧಿಕಾರಿಗಳು ಆಕ್ಷೇಪಣೆಗಳ ನೋಟಿಸ್ ನೀಡಿ ವಿಲೇವಾರಿ ಮಾಡಬೇಕಿದೆ.

ಬೆಂಗಳೂರಿನಲ್ಲಿ ಅಂದಾಜು 40 ಲಕ್ಷ ಮನೆಗಳಿದ್ದು, 1.03 ಕೋಟಿಗೂ ಹೆಚ್ಚು ಮತದಾರರಿದ್ದಾರೆ. ಈಗಾಗಲೇ 53.85 ಲಕ್ಷ ಮತದಾರರಿಗೆ ನಮೂನೆಗಳನ್ನು ವಿತರಿಸಲಾಗಿದ್ದು, ಪ್ರತಿಯೊಬ್ಬ ಚುನಾವಣಾ ನೋಂದಣಾಧಿಕಾರಿಯು ಅಂದಾಜು 1 ಲಕ್ಷ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಬೇಕಾದ ಒತ್ತಡದಲ್ಲಿದ್ದಾರೆ ಎಂದು ಕಾರಣ ನೀಡದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...