ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಮುತ್ತ ಕುದುರೆ ಸಂಬಂಧಿತ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ

Date:

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.

- Advertisement -

ಟರ್ಪ್ ಕ್ಲಬ್ ಸುತ್ತಮುತ್ತ ಗ್ಲಾಂಡರ್ಸ್ ರೋಗ ಪೀಡಿತ ಪ್ರದೇಶವೆಂದು ಘೋಷಿಸಿರುವ ಭಾಗದಲ್ಲಿ ಕುದುರೆ ಮತ್ತು ಕುದುರೆ ಜಾತಿಗೆ ಸೇರಿದ ಪ್ರಾಣಿಗಳ ಚಲನವಲನ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿರುವ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ದೃಢಪಟ್ಟಿದೆ. ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಭಂದಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಕಾಲಂ-6 ರಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಟರ್ಫ್ ಕ್ಲಬ್ ಅನ್ನು ಗ್ಲಾಂಡರ್ಸ್ ಕೇಂದ್ರೀಕೃತ ಸ್ಥಳ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಚಿತ್ರಪಟಗಳಲ್ಲಿ ತೆಂಡೂಲ್ಕರ್- ಮೆಸ್ಸಿ ಅಪೂರ್ವ ಭೇಟಿಯ ಅವಿಸ್ಮರಣೀಯ ಕ್ಷಣಗಳು

ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವನ ಹಾಗೂ ಪ್ರಾಣಿಗಳ ಮನೋರಂಜನೆ ಮೆರವಣೆಗೆ ಶುಭಕಾರ್ಯಗಳು ನಿರ್ಬಂಧ ವಿಧಿಸಲಾಗಿದೆ.

ಏನಿದು ಗ್ಲಾಂಡರ್ಸ್ ರೋಗ? ಮನುಷ್ಯರಿಗೆ ಏನು ಅಪಾಯ?

ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಿಗೆ ಸೋಂಕು ತರುತ್ತದೆ.
ಇದು ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯದಿಂದ ಉಂಟಾಗುತ್ತದೆ.
ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ, ಪ್ರತ್ಯೇತ ಪ್ರಕರಣಗಳಲ್ಲಿ ಗಂಟುಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತದೆ.
ಉಲ್ಬಣವಾದರೆ ಸಾವು ಕೂಡ ಸಂಭವಿಸುತ್ತದೆ.
ಈ ಗ್ಲಾಂಡರ್ಸ್ ರೋಗ, ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಸೋಂಕು ಪೀಡಿತ ಪ್ರಾಣಿಯ ಸಂಪರ್ಕಕ್ಕೆ ಬರುವ ಪ್ರಾಣಿ ನಿರ್ವಾಹಕರು ಅಥವಾ ಅಕ್ಕಪಕ್ಕದವರು ಸೋಂಕಿಗೆ ತುತ್ತಾಗುವ ಅಪಾಯವಿದೆ‌.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...