ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

Date:

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಭಾರಿ ಮಳೆ ನೀರು ನಿಂತು ಎಲ್ಲಾ ವಾಹನ ಸವಾರರು ತೀವ್ರವಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಮುಂಜಾನೆಯಿಂದಲೇ ಬಿಸಿಲಿನ ತಾಪಕ್ಕೆ ಹಾಗೂ ಸೆಕೆಗೆ ತೀವ್ರವಾಗಿ ತತ್ತರಿಸಿದ್ದ ಸಿಲಿಕಾನ್ ಸಿಟಿಯ ಜನತೆಗೆ ಸಂಜೆಯಾಗುತ್ತಿದ್ದಂತೆ ದಿಢೀರನೆ ಸುರಿದ ತುಂತುರು ಮಳೆಯ ಸಿಂಚನವು ತಂಪೆರೆದಿದೆ. ಆ ಮೂಲಕ ಉಷ್ಣಾಂಶದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

- Advertisement -

​ವಿಶೇಷವಾಗಿ ನಗರದ ಪ್ರಮುಖ ಭಾಗಗಳಾದ ಮಾಗಡಿ ರಸ್ತೆ, ನೈಸ್ ರಸ್ತೆ, ವಿಜಯನಗರ ಹಾಗೂ ಕೆಂಗೇರಿ ಸೇರಿದಂತೆ ಈ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬಹುತೇಕ ಬಿರುಸಿನ ಮಳೆಯಾಗಿದೆ. ಇದರ ಜೊತೆಗೆ ಮಲ್ಲೇಶ್ವರಂ, ರಾಜಾಜಿನಗರ, ಪೀಣ್ಯ, ಮಾದಾವರ, ಮಹದೇವಪುರ, ಹಾಗೂ ಕೆ.ಆರ್. ವೃತ್ತದ ಸಮೀಪವೂ ವರುಣನ ಆರ್ಭಟ ಜೋರಾಗಿತ್ತು. ಮಳೆಯಿಂದಾಗಿ ವಾಹನ ದಟ್ಟಣೆ ಹೆಚ್ಚಾಗಿ, ಸವಾರರು ಪರದಾಡುವಂತಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

​ಇದರ ಹೊರತಾಗಿ ನಗರದ ಹೃದಯ ಭಾಗ ಎನಿಸಿಕೊಂಡಿರುವ ಕಲಾಸಿಪಾಳ್ಯ, ಕಾರ್ಪೊರೇಷನ್ ವೃತ್ತ, ವಿಧಾನಸೌಧ, ಲಾಲ್‌ಬಾಗ್, ಜಯನಗರ ಮತ್ತು ಶಾಂತಿನಗರದ ಸುತ್ತಮುತ್ತ ಸಹ ಉತ್ತಮ ಮಳೆಯಾಗಿದೆ. ದಿಢೀರನೆ ದಟ್ಟ ಕಾರ್ಮೋಡ ಕವಿದು ಮಳೆ ಸುರಿಯಲಾರಂಭಿಸಿದ್ದರಿಂದ ಮಳೆಯಿಂದ ರಕ್ಷಣೆ ಪಡೆಯಲು ದ್ವಿಚಕ್ರ ವಾಹನ ಸವಾರರು ಅನಿವಾರ್ಯವಾಗಿ ಮೇಲ್ಸೇತುವೆ ಕೆಳಗೆ, ಮರದ ಕೆಳಗೆ ಹಾಗೂ ಬಸ್ ನಿಲ್ದಾಣಗಳ ಮೊರೆ ಹೋದ ದೃಶ್ಯಗಳು ಕಂಡುಬಂದವು.

​ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ, ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇದೇ ಕಾರಣಕ್ಕಾಗಿ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿತ್ತು. ಅದರಂತೆಯೇ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಗುಡುಗು ಸಹಿತ ಭಾರಿ ಮಳೆ ಸುರಿಯಿತು.

Advertisements

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...