ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್

Date:

2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದ್ದು, ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ತಿಳಿಸಿದ್ದಾರೆ.

- Advertisement -

ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 33 ಅಂಕ ನಿಗದಿ- ಭೇದಭಾವ ಹೆಚ್ಚಿಸುವ ಪಲಾಯನವಾದಿ ಹಾದಿ

ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

572 ಸೀಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು:

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1,694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2,116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...