‘ಜೂ.24ರೊಳಗೆ ಜಿಬಿಎ ಚುನಾವಣೆ ನಡೆಸಿ’: ಸರ್ಕಾರಕ್ಕೆ ಚುನಾವಣಾ ಆಯುಕ್ತ ಸಂಗ್ರೇಶಿ ಎಚ್ಚರಿಕೆ

Date:

ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಗಡುವು ನೀಡಿದೆ. ಜೂನ್ 14 ರಿಂದ 24ರ ಒಳಗೆ ಸರ್ಕಾರ ದಿನಾಂಕವನ್ನು ಪ್ರಕಟಿಸಬೇಕು. ಒಂದು ವೇಳೆ ಸರ್ಕಾರ ವಿಳಂಬ ಮಾಡಿದರೆ, ಚುನಾವಣಾ ಆಯೋಗವೇ ನೇರವಾಗಿ ದಿನಾಂಕವನ್ನು ನಿಗದಿ ಮಾಡಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

- Advertisement -

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ನಿಗದಿತ ಗಡುವಿನೊಳಗೆ ಚುನಾವಣೆ ನಡೆಸಬೇಕಾದ ಹೊಣೆಗಾರಿಕೆ ಆಯೋಗಕ್ಕಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಪ್ರಕ್ರಿಯೆ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಆಯುಕ್ತರು ಸರ್ಕಾರಕ್ಕೆ ಸ್ಪಷ್ಟ ಗಡುವು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ತಮಿಳುನಾಡಿನಲ್ಲಿ ತುಮಕೂರು ಮೂಲದ ಕನ್ನಡಿಗನ ಜಯಭೇರಿ; ಟಿವಿಕೆ ಪಕ್ಷದಿಂದ ಸುನಿಲ್ ಆನಂದ್ ಶಾಸಕ

“ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಲ್ಲ, ಇದೊಂದು ಸ್ವತಂತ್ರ ಸಾಂವಿಧಾನಿಕ ಸಂಸ್ಥೆ. ನಿಯಮಗಳ ಪ್ರಕಾರ ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಜಿಬಿಎ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರವು ಜೂನ್ 14 ಮತ್ತು 24ರ ನಡುವಿನ ಅವಧಿಯಲ್ಲಿ ಸೂಕ್ತ ದಿನಾಂಕವನ್ನು ಪ್ರಕಟಿಸಲು ವಿಫಲವಾದರೆ, ಆಯೋಗವು ತನ್ನ ಪರಮಾಧಿಕಾರವನ್ನು ಬಳಸಿ ಮುಂದಿನ ಹೆಜ್ಜೆ ಇಡಲಿದೆ ಹಾಗೂ ತಾನೇ ದಿನಾಂಕವನ್ನು ಘೋಷಿಸಲಿದೆ” ಎಂದು ಜಿ.ಎಸ್. ಸಂಗ್ರೇಶಿ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರದ ಭವಿಷ್ಯದ ಆಡಳಿತದ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಚುನಾವಣೆಗಳು ಅತ್ಯಂತ ಮಹತ್ವದ್ದಾಗಿವೆ. ಈಗಾಗಲೇ ಆಯೋಗವು ಕರಡು ಮತದಾರರ ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ವಿಲೇವಾರಿ, ಮತಗಟ್ಟೆಗಳ ಸ್ಥಾಪನೆ ಮತ್ತು ಮ್ಯಾಪಿಂಗ್‌ನಂತಹ ನಿರ್ಣಾಯಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಹಂತದಲ್ಲಿದೆ. ವಿಶೇಷವಾಗಿ ಈ ಬಾರಿಯ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಾಗಿ ಸಾಂಪ್ರದಾಯಿಕ ಮತಪತ್ರಗಳನ್ನು (ಬ್ಯಾಲೆಟ್ ಪೇಪರ್) ಬಳಸುವ ನಿರ್ಧಾರವನ್ನು ಆಯೋಗ ಈ ಹಿಂದೆಯೇ ಪ್ರಕಟಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...