ಚಾಮರಾಜಪೇಟೆ ಈದ್ಗಾ ಮೈದಾನ: ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್

Date:

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇತರೆ ಪ್ರಾಧಿಕಾರಗಳಿಗೆ ಕರ್ನಾಟಕ ಹೈಕೋರ್ಟ್​​ ಮಂಗಳವಾರ ಸೂಚನೆ ನೀಡಿದೆ.

- Advertisement -

ನವೆಂಬರ್ 1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಡೆಸಲು ಅವಕಾಶ ನೀಡಿ, ಆದೇಶಿಸಿರುವ ಹೈಕೋರ್ಟ್, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಕಾರ್ಯಕ್ರಮ ನಡೆಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಸ್ಪಷ್ಟ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೇ ವೇಳೆ, ರಾಜ್ಯದ ಧ್ವಜ ಮಾತ್ರ ಹಾರಾಟ ಮಾಡಿಸುವುದಾಗಿ ಅರ್ಜಿದಾರರಾದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯಕ್ಕೆ ಬರೆದಿರುವ ಮುಚ್ಚಳಿಕೆ ಪತ್ರದಲ್ಲಿ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಸಂದರ್ಭ ಕೂಡ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಆಚರಣೆ ಮಾಡುವ ವಿಚಾರವಾಗಿ ಹಿಂದೂ ಪರ ಸಂಘಟನೆಗಳಿಂದ ಆಗ್ರಹ ವ್ಯಕ್ತವಾಗಿತ್ತು.

ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಚಾಮರಾಜಪೇಟೆ ನಾಗರಿಕ ಒಕ್ಕೂಟವು ಮೂರು ದಿನಗಳ ಕಾಲ ರಾಜ್ಯೋತ್ಸವ ಆಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅಣ್ಣಮ್ಮ ಉತ್ಸವ ನಡೆಸಲು ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು.‌ ಆದರೆ ಜಿಲ್ಲಾಧಿಕಾರಿಗಳು ಈ ಮನವಿಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಒಕ್ಕೂಟವು ನ್ಯಾಯಾಲಯದ​ ಮೊರೆ ಹೋಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...