ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಿಂದ ‘ಫ್ಲೈಬಸ್‌’ ಸೇವೆ ಆರಂಭಿಸಿದ ಕೆಎಸ್‌ಆರ್‌ಟಿಸಿ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾ ನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ‘ಫ್ಲೈಬಸ್‍’ ಸೇವೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

- Advertisement -

ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಒಟ್ಟು 13 ಫ್ಲೈಬಸ್‍ಸೇವೆಗಳನ್ನು 42 ಟ್ರಿಪ್‍ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಸಂಚರಿಸುತ್ತಿದೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿಲ್ದಾಣದಿಂದ ನಿರ್ಗಮಿಸುವ ಪ್ರಯಾಣಿಕರ ಸೌಲಭ್ಯಕ್ಕಾಗಿ ಪ್ರತಿಷ್ಠಿತ ‘ಫ್ಲೈ ಬಸ್’ ಸಾರಿಗೆ ಸೇವೆಯನ್ನು 2013ರ ಆಗಸ್ಟ್ 13ರಿಂದ ಪ್ರಾರಂಭಿಸಲಾಗಿತ್ತು. ಈ ಸೇವೆಗೆ ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಈಗ ದಶಕದ ವರ್ಷದಲ್ಲಿ ಹೊಸ ಟರ್ಮಿನಲ್‌ನಿಂದಲೂ ಕೂಡ ಫ್ಲೈ ಬಸ್ ಸೇವೆಗೆ ಚಾಲನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಫ್ಲೈಬಸ್ ಸಾರಿಗೆಗಳನ್ನು ಹಂತ ಹಂತವಾಗಿ ಪ್ರಾರಂಭಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ 9, ಮಡಿಕೇರಿಗೆ 2 ಹಾಗೂ ಕುಂದಾಪುರಕ್ಕೆ 2 ಫ್ಲೈಬಸ್ ಸಾರಿಗೆಯನ್ನು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪ್ರತಿ ದಿನ 137 ಹವಾನಿಯಂತ್ರಿತ ಬಸ್‍ಗಳ ಮೂಲಕ 944 ಟ್ರಿಪ್ಪುಗಳಲ್ಲಿ ಕಾರ್ಯಾಚರಣೆ ನಡೆಸಿ 47,907 ಕಿ.ಮಿಗಳನ್ನು ಕ್ರಮಿಸಿ 14000 ಪ್ರಯಾಣಿಕರಿಗೆ ಸೇವೆಯನ್ನು ಕಲ್ಪಿಸಲಾಗಿದೆ.

ವಿಮಾನ ನಿಲ್ದಾಣದ ಲಾಂಜ್‍ನಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸುಗಳ ಕಾರ್ಯಾಚರಣೆಯ ಸಮಯ, ಡಿಜಿಟಲ್ ಫಲಕಗಳು, ಸಾರ್ವಜನಿಕ ಉದ್ಘೋಷಣೆಯ ವ್ಯವಸ್ಥೆ ಕೂಡ ಕಲ್ಪಿಸಲಾಗಿದ್ದು, 40 ಸಿಬ್ಬಂದಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರಿಗೆ ಮಾಹಿತಿಯನ್ನು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಒದಗಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಫ್ಲೈಬಸ್‌’ ಸೇವೆಯ ಚಾಲನೆ ನೀಡುವ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸತ್ಯಕಿ ರಘುನಾಥ್, ಮುಖ್ಯ ಮಾರುಕಟ್ಟೆ ಅಧಿಕಾರಿ ಶಾಲಿನಿ ರಾವ್, ಡೊಮಿನಿಕ್ ದೇವಸಿಯಾ, ವಿಶಾಲ್ ಕೆ, ಸಂಜಯ್ ಚಂದ್ರ, ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...