ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

Date:

Advertisements

ಬೆಂಗಳೂರು: ‘ಪರಿಸರಕ್ಕಾಗಿ ನಾವು’ ಸಂಘಟನೆ ವತಿಯಿಂದ ಏಪ್ರಿಲ್ 6ರಂದು ‘ಪರಿಸರ ಪ್ರಣಾಳಿಕೆಗಾಗಿ ಬೆಂಗಳೂರು ಸಮಾವೇಶ’ವನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ನಾಗೇಶ ಹೆಗಡೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿವಿಧ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಆಕರ್ಷಕ ಭರವಸೆಗಳನ್ನು ಹೊಂದಿರುವ ಪ್ರಣಾಳಿಕೆಗಳನ್ನು ಸಿದ್ಧಪಡಿಸುತ್ತಿವೆ. ಆದರೆ, ಈ ಬಾರಿ ಪರಿಸ್ಥಿತಿ ಎಂದಿನಂತಿಲ್ಲ. ನಾವೆಲ್ಲ ಒಂದು ಮಹಾ ಪರಿಸರ ಬಿಕ್ಕಟ್ಟಿನ ಅತ್ಯಂತ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದೇವೆ. ಆದ್ದರಿಂದ, ಎಲ್ಲ ಪಕ್ಷಗಳು ಪರಿಸರ ಸಂರಕ್ಷಣೆಯ ವಿಚಾರಗಳನ್ನು ತಮ್ಮ ಪ್ರಣಾಳಿಕೆಗಳಲ್ಲಿ ಸೇರಿಸಬೇಕು” ಎಂದು ಒತ್ತಾಯಿಸಿದರು.

“ಹವಾಮಾನ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಮತ್ತೆಂದೂ ಸರಿಪಡಿಸಲು ಸಾಧ್ಯವಾಗದಂತಹ ಪರಿಸರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿ, ನೀರಿನ ಅಭಾವ, ಬಿಸಿ ಗಾಳಿ, ಪ್ರವಾಹ, ಬರಗಾಲ, ಹಿಮಗಡ್ಡೆ ಕರಗುವಿಕೆ ಇತ್ಯಾದಿ ಸಮಸ್ಯೆಗಳಿಗೆ ನಾವು ಸಿಲುಕಿದ್ದೇವೆ. ಹಾಗಾಗಿ, ಸದ್ಯ ನಮ್ಮ ದೇಶದ ಚುನಾವಣೆಯಲ್ಲಿ ಭಾಗವಹಿಸುವ ಎಲ್ಲ ಪಕ್ಷಗಳು, ಪಕ್ಷ ಬೇಧ ಮರೆತು ತಮ್ಮ ಪ್ರಣಾಳಿಕೆಗಳಲ್ಲಿ ಪರಿಸರ ತುರ್ತು ಎದುರಿಸುವ ವಿಚಾರಗಳನ್ನು ಆದ್ಯತೆಯ ಮೇರೆಗೆ ಸೇರಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Advertisements

“ಪರಿಸರಕ್ಕಾಗಿ ನಾವು” ಕರ್ನಾಟಕದ ಸಮಾನ ಮನಸ್ಕ ಪರಿಸರ ಕಾರ್ಯಕರ್ತರು ಸೇರಿ ಸ್ಥಾಪಿಸಿರುವ ಸಂಘಟನೆ. ಹವಾಗುಣ ವೈಪರಿತ್ಯ ಮತ್ತು ಇತರ ಗಂಭೀರ ಪರಿಸರ ಸಮಸ್ಯೆಗಳನ್ನು ಎದುರಿಸಲು ನಾವು ವೈಯಕ್ತಿಕ, ಸಾಮುದಾಯಿಕ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸ್ಥಳೀಯವಾಗಿ ರಚನಾತ್ಮಕ ಕಾರ್ಯ ಮಾಡುವುದರೊಂದಿಗೆ ಸರಕಾರದ ನೀತಿ ಮತ್ತು ಕಾನೂನು ವಿಷಯದಲ್ಲಿ ಸುಸ್ಥಿರತೆ ಮತ್ತು ಸಮಾನತೆಯ ಗುರಿಯಿಟ್ಟುಕೊಂಡು ಪ್ರಭಾವ ಬೀರುವ ಪ್ರಯತ್ನ ನಮ್ಮದು ಎಂದು ಸಂಘಟಕರು ತಿಳಿಸಿದ್ದಾರೆ.

ಶೋಭಾ ಭಟ್, ಆಂಜನೇಯ ರೆಡ್ಡಿ ನೀರಾವರಿ, ಪಾರ್ವತಿ ಶ್ರೀರಾಮ್, ಪಾಪೇಗೌಡ, ವಿಶಾಲಾಕ್ಷಿ, ಪರಿಸರ ಮಂಜು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X