ದೆಹಲಿಯಲ್ಲಿ ಬಿಕ್ಲು ಶಿವ ಪ್ರಕರಣದ ಪ್ರಮುಖ ಆರೋಪಿ ಜಗ್ಗನ ಬಂಧನ

Date:

Advertisements

ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ (ಆ.26) ಬಂಧಿಸಿದ್ದಾರೆ.

ಕೊಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್‌ ಅಲಿಯಾಸ್‌ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದ್ದಾರೆ. ಜಗದೀಶ್‌ನನ್ನು ಬಂಧಿಸಿ ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಜಗದೀಶ್‌ ಅಲಿಯಾಸ್‌ ಜಗ್ಗನ ವಿರುದ್ಧ ಬ್ಲೂಕಾರ್ನರ್‌ ನೋಟಿಸ್‌ ಹೊರಡಿಸಿದರೂ ಆರೋಪಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

Advertisements

ಜಗದೀಶ್ ದುಬೈನಿಂದ ಥಾಯ್ಲೆಂಡ್‌, ಬಳಿಕ ಇಂಡೋನೇಷ್ಯಾ ಹೀಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ದೇಶ ಸ್ಥಳಾಂತರವಾಗಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮತ್ತೂಮ್ಮೆ ಇಂಟರ್‌ಪೋಲ್‌ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಯನ್ನು ಆದಷ್ಟೇ ಬೇಗ ಬಂಧಿಸಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಲವೆಂಬ ಗಾಲಿಯಡಿ ಡಿ.ಕೆ.ಶಿ.; ಏಳುವರೇ, ಬೀಳುವರೇ?

ಪೊಲೀಸರ ಕಣ್ಣು ತಪ್ಪಿಸಿ ವಿದೇಶದಲ್ಲಿ ಜಗದೀಶ್‌ ಓಡಾಡುತ್ತಿದ್ದ. ಬೆಂಗಳೂರಿನ ಕೆಲವರು ಆತನ ಖಾತೆಗೆ ಹಣ ಜಮೆ ಮಾಡುತ್ತಿರುವುದು ಗೊತ್ತಾಗಿತ್ತು. ಈ ಹಣದಿಂದಲೇ ಆತ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿದ್ದ. ಆದರಿಂದ ಆತನ ಬ್ಯಾಂಕ್‌ ಖಾತೆ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.

ಜು.15ರಂದು ಮಾರಕಾಸ್ತ್ರಗಳಿಂದ ಶಿವಪ್ರಕಾಶ್‌ನನ್ನು ಮನೆ ಬಳಿಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಜಗದೀಶ್‌ ಮತ್ತು ಶಾಸಕ ಭೈರತಿ ಬಸವರಾಜ್ ಸೇರಿ 6 ಮಂದಿ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು.

ಶಾಸಕ ಭೈರತಿ ಬಸವರಾಜ್ ಅವರನ್ನು 2 ಬಾರಿ ವಿಚಾರಣೆ ನಡೆಸಲಾಗಿತ್ತು. ಕೆ ಜಿ ಹಳ್ಳಿ ಎಸಿಪಿ ಪ್ರಕಾಶ್‌ ರಾಥೋಡ್‌ ನೇತೃತ್ವದಲ್ಲಿ ಈ ಪ್ರಕರಣದ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

Download Eedina App Android / iOS

X