ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ‘ಕಾಕ್ರೋಚ್ ಪಾರ್ಟಿ’ ಬೃಹತ್ ಪ್ರತಿಭಟನೆ

Date:

ದೇಶಾದ್ಯಂತ ಸಂಚಲನ ಮೂಡಿಸಿರುವ ‘ನೀಟ್’ (NEET) ಪರೀಕ್ಷಾ ಹಗರಣ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಇಂದು (ಜೂನ್ 14) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಎಡಬಿಡದೆ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ನೂರಾರು ಮುಖಂಡರು ಮತ್ತು ಕಾರ್ಯಕರ್ತರು, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಾಗೂ ವಕ್ತಾರ ಸೌರವ್ ದಾಸ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಹೈದರಾಬಾದ್, ಪುಣೆ ಹಾಗೂ ನವದೆಹಲಿಯ ಬಳಿಕ ಇದೀಗ ಸಿಲಿಕಾನ್ ಸಿಟಿಯಲ್ಲೂ ಪ್ರತಿಭಟನೆಯ ಕಹಳೆ ಮೊಳಗಿಸಿರುವ ಸಿಜೆಪಿ ಹೋರಾಟಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್ ಹಾಗೂ ಕಿರಣ್ ಶ್ರೀನಿವಾಸ್ ಬೆಂಬಲ ಸೂಚಿಸಿ, ಧರಣಿಯಲ್ಲಿ ಪಾಲ್ಗೊಂಡರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ನಟ ಪ್ರಕಾಶ್ ರಾಜ್, “ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನದಿಂದಾಗಿ ದೇಶದ ಸುಮಾರು ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಗರಣಗಳ ಬೆನ್ನಲ್ಲೇ ಆತಂಕಗೊಂಡು ಏಳೆಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಎಲ್ಲ ಅನಾಹುತಗಳ ನೈತಿಕ ಹೊಣೆಗಾರಿಕೆಯನ್ನು ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು,” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದರೂ, ಯುವಜನತೆಯನ್ನು ಬೀದಿಗೆ ತಳ್ಳಿ ಪ್ರಧಾನಿಯವರು ವಿದೇಶ ಪ್ರವಾಸದಲ್ಲಿ ನಿರತರಾಗಿದ್ದಾರೆ. ಆರ್ಥಿಕ ಬಿಕ್ಕಟ್ಟು ಹಾಗೂ ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ದೇಶವನ್ನು ವಿನಾಶದತ್ತ ದೂಡುತ್ತಿವೆ. ಇಂತಹ ಅನ್ಯಾಯದ ವಿರುದ್ಧ ಯುವಜನತೆ ಸಿಡಿದೇಳುವ ಕಾಲ ಸನ್ನಿಹಿತವಾಗಿದ್ದು, ನ್ಯಾಯ ಸಿಗುವವರೆಗೂ ನಮ್ಮ ಈ ಹೋರಾಟ ನಿರಂತರವಾಗಿರಲಿದೆ,” ಎಂದು ಅವರು ಎಚ್ಚರಿಸಿದರು. ಇದೇ ವೇಳೆ, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ‘ಜೈ ಭೀಮ್’ ಘೋಷಣೆಗಳನ್ನು ಮೊಳಗಿಸಿದರು.

Advertisements

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಸಿಜೆಪಿ ವಕ್ತಾರ ಸೌರವ್ ದಾಸ್ ಮಾತನಾಡಿ, “ಕೇವಲ ನೀಟ್ ಪರೀಕ್ಷೆ ಮಾತ್ರವಲ್ಲದೆ, ಸಿಬಿಎಸ್‌ಇ ಫಲಿತಾಂಶದಲ್ಲಿಯೂ ಭಾರೀ ಅಕ್ರಮಗಳು ನಡೆದಿವೆ. ಆಡಳಿತಾರೂಢರ ಕುಮ್ಮಕ್ಕಿಲ್ಲದೆ ಇಂತಹ ಹಗರಣಗಳು ನಡೆಯಲು ಸಾಧ್ಯವಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಇಂತಹ ಘೋರ ಅನ್ಯಾಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ದೇಶದ ದುರಾಡಳಿತ ವ್ಯವಸ್ಥೆ ಬದಲಾಗಬೇಕೆಂಬ ನಮ್ಮ ಈ ಹೋರಾಟಕ್ಕೆ ದೇಶಾದ್ಯಂತ ಕೋಟ್ಯಂತರ ಯುವಜನರು ಕೈಜೋಡಿಸುತ್ತಿದ್ದು, ಇದಿಷ್ಟಕ್ಕೇ ನಿಲ್ಲುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.

ಈ ಬೃಹತ್ ಪ್ರತಿಭಟನೆಯಲ್ಲಿ ಸಮಾಜದ ವಿವಿಧ ಸ್ತರದ ಗಣ್ಯರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರಮುಖವಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಹಾಗೂ ನಟ ಕಿರಣ್ ಶ್ರೀನಿವಾಸ್ ಅವರು ಖುದ್ದಾಗಿ ಹಾಜರಿದ್ದು ವಿದ್ಯಾರ್ಥಿಗಳ ಹೋರಾಟಕ್ಕೆ ದನಿಗೂಡಿಸಿದರು. ಇವರೊಂದಿಗೆ ‘ಸಿಜೆಪಿ’ ಸಂಸ್ಥಾಪಕ ಅಭಿಜೀತ್ ದೀಪ್ಕೆ, ವಕ್ತಾರ ಸೌರವ್ ದಾಸ್ ಸೇರಿದಂತೆ ಸಂಘಟನೆಯ ಹಲವು ಪ್ರಮುಖ ಮುಖಂಡರು ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು. ಇವರಲ್ಲದೆ, ಅನ್ಯಾಯದ ವಿರುದ್ಧ ಸಿಡಿದೆದ್ದ ನೂರಾರು ವಿದ್ಯಾರ್ಥಿಗಳು, ಯುವ ಮುಖಂಡರು, ಶೈಕ್ಷಣಿಕ ಕಾರ್ಯಕರ್ತರು ಹಾಗೂ ವಿವಿಧ ಪ್ರಗತಿಪರ ಚಿಂತಕರು ಮಳೆಯನ್ನೂ ಲೆಕ್ಕಿಸದೆ ಈ ಧರಣಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ತಮ್ಮ ಆಕ್ರೋಶವನ್ನು ಹೊರಹಾಕಿದರು. ಪ್ರತಿಭಟನೆಗೂ ಮುನ್ನ ಕಾಕ್ರೋಚ್ ಪಕ್ಷದ ಕಾರ್ಯಕರ್ತರು ನಟ ಪುನೀತ್ ರಾಜ್‍ಕುಮಾರ್ ಸಮಾಧಿಗೆ ನಮನ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...