ನಮ್ಮ ಮೆಟ್ರೋದಲ್ಲಿ 50 ಪಟ್ಟು ದಂಡ ಹೆಚ್ಚಳ: ನಿಯಮ ಉಲ್ಲಂಘಿಸಿದರೆ ಗರಿಷ್ಠ ₹25,000 ವರೆಗೆ ದಂಡ

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಮತ್ತು ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ದಂಡದ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯನ್ವಯ ಈ ಹೊಸ ಪರಿಷ್ಕೃತ ದಂಡವನ್ನು ಜಾರಿಗೊಳಿಸಲಾಗಿದೆ. ಯಾವ ತಪ್ಪಿಗೆ ಎಷ್ಟು ದಂಡ ಬೀಳಲಿದೆ ಎಂಬ ನಿಖರ ವಿವರಗಳನ್ನು ತಿಳಿಸಲಾಗಿದೆ.

- Advertisement -

ಪರಿಷ್ಕೃತ ನಿಯಮಗಳ ಪ್ರಕಾರ, ಮೆಟ್ರೋ ಹಳಿಗೆ (ಟ್ರ್ಯಾಕ್) ಜಿಗಿಯುವುದು, ಟ್ರ್ಯಾಕ್ ಮೇಲೆ ಅನಧಿಕೃತವಾಗಿ ಓಡಾಡುವುದು ಹಾಗೂ ಟಿಕೆಟ್ ಮತ್ತು ಪಾಸ್ ಅನ್ನು ದುರ್ಬಳಕೆ ಮಾಡಿಕೊಂಡರೆ ₹5,000 ದಿಂದ ಗರಿಷ್ಠ ₹25,000 ವರೆಗೆ ಭಾರಿ ದಂಡ ವಿಧಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅದೇ ರೀತಿ, ಹೆಡ್‌ಫೋನ್ ಬಳಸದೆ ಜೋರಾಗಿ ಸಂಗೀತ ಕೇಳುವುದು ಅಥವಾ ವಿಡಿಯೋ ನೋಡುವುದು, ಅನುಮತಿ ಇಲ್ಲದೆ ವ್ಯಾಪಾರ ಮಾಡುವುದು, ರೀಲ್ಸ್ ಮಾಡುವುದು, ಊಟ ಮತ್ತು ತಿಂಡಿ ಸೇವನೆ ಮಾಡುವುದು ಹಾಗೂ ನೆಲದ ಮೇಲೆ ಕುಳಿತುಕೊಳ್ಳುವಂತಹ ಕೃತ್ಯಗಳಿಗೆ ₹2,500 ದಿಂದ ₹10,000 ವರೆಗೆ ದಂಡ ಬೀಳಲಿದೆ. ಗಮನಾರ್ಹವಾಗಿ, ಈ ಉಲ್ಲಂಘನೆಗಳಿಗೆ ಈ ಹಿಂದೆ ಕೇವಲ ₹500 ದಂಡ ವಿಧಿಸಲಾಗುತ್ತಿತ್ತು.

ಇನ್ನು ಮೆಟ್ರೋ ನಿಲ್ದಾಣದ ಗೋಡೆಗಳ ಮೇಲೆ ಬರೆಯುವುದು, ಪೋಸ್ಟರ್ ಅಂಟಿಸುವುದು ಅಥವಾ ಚಿತ್ರ ಬಿಡಿಸುವಂತಹ ಕೃತ್ಯಗಳಿಗೆ ಈ ಹಿಂದೆ ಕೇವಲ ₹1,000 ದಂಡವಿತ್ತು. ಆದರೆ, ಇದೀಗ ಈ ದಂಡದ ಮೊತ್ತವನ್ನು ₹10,000 ಕ್ಕೆ ಹೆಚ್ಚಿಸಿ ಆದೇಶಿಸಲಾಗಿದೆ.

ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಕಾಪಾಡಲು ಮತ್ತು ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಪ್ರಮುಖ ಉದ್ದೇಶದಿಂದ ಈ ದುಬಾರಿ ದಂಡದ ನಿಯಮಗಳನ್ನು ಜಾರಿಗೆ ತರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...