ಪರ್ಯಾಯ ಯೋಜನೆ ಇಲ್ಲ; ಬಡಾವಣೆ ನಿರ್ಮಾಣಕ್ಕೆ ಮರಗಳ ಬಲಿ

Date:

ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್‌ಪಿಕೆಎಲ್‌) ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇತಿಹಾಸವಿರುವ ಮರಗಳ ನಿರ್ನಾಮ ಮಾಡಿದ್ದಲ್ಲದೆ, ಮರಗಳ ಬದಲಾಗಿ ಸಸಿ ನೆಡುವ ಯೋಜನೆ ಸಹ ಹೂಡಿಲ್ಲ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಾದಿತ ಎನ್‌ಪಿಕೆಎಲ್‌ ಬಡಾವಣೆ ಬಳಿ ಶೇ. 75ರಷ್ಟಕ್ಕೂ ಹೆಚ್ಚು ಮರಗಳಿದ್ದವು. ಬಿಡಿಎ ಅವೈಜ್ಞಾನಿಕ ಕಾಮಗಾರಿಯಿಂದಾಗಿ, ಕಡಿದ ಮರಗಳ ಬದಲಾಗಿ ಸಸಿ ನೆಡುವ ಯೋಜನೆಯ ಮರೆತಿದೆ. ರಸ್ತೆಗಳ ಬದಿ ಕಿಂಚಿತ್ತು ಜಾಗ ಕೊಡದೇ, ಸಂಪೂರ್ಣವಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇದು ವಾಹನಗಳ ಸಂಚಾರಕ್ಕೆ ಮತ್ತು ಪಾದಾಚಾರಿಗಳು ನಡೆದಾಡುವಾಗ ನೆರಳಿಲ್ಲದೆ ಹೆಚ್ಚು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಧಿಕ ಮರ ಗಿಡಗಳನ್ನು ಬಡಾವಣೆ ನಿರ್ಮಾಣಕ್ಕಾಗಿ ನಾಶಮಾಡಲಾಗಿದೆ. ಯುಟಿಲಿಟಿ ಚಾನೆಲ್‌ನಿಂದಾಗಿ 30, 40, 50 ಅಡಿ ರಸ್ತೆಗಳಲ್ಲಿ ಒಂದು ಕಡೆ ಮಾತ್ರ ಗಿಡಗಳನ್ನು ನೆಡಲು ಅವಕಾಶವಿದೆ. ಇನ್ನೊಂದು ಬದಿಯ ಬೀದಿ ದೀಪದ ಕಂಬಗಳು, ಫೀಡರ್ ಪಿಲ್ಲರ್ ಬಾಕ್ಸ್, ಟ್ರಾನ್ಸ್‌ಫಾರ್ಮರ್ ಕಂಬಗಳು ಹಾಗೂ ವೈಯಕ್ತಿಕ ಸೈಟ್ ಪ್ರವೇಶ ಬರುವುದರಿಂದ ಗಿಡಗಳನ್ನು ನೆಡಲು ಸಾಧ್ಯವಿಲ್ಲ. 60 ಅಡಿ ರಸ್ತೆಗಳಲ್ಲಿ ಎರಡೂ ಬದಿಯ ಯುಟಿಲಿಟಿ ಚಾನಲ್ ಬರುವುದರಿಂದ ಗಿಡಗಳನ್ನು ಬೆಳೆಸಲು ಸ್ಥಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂದಿನ ದಿನಗಳಲ್ಲಿ ಬಡಾವಣೆಯ ಅಭಿವೃದ್ಧಿಗಾಗಿ ಮತ್ತಷ್ಟು ಮರಗಳಿಗೆ ಕೊಡಲಿ ಬೀಳುತ್ತದೆ. ಮರಗಿಡಗಳ ಸಂಖ್ಯೆಯು ಕಡಿಮೆಯಾಗುವುದರಿಂದ ಅಂತರ್ಜಲ ಮತ್ತು ವಾತಾವರಣವೂ ಶಾಖದಿಂದ ಕೂಡಿರುತ್ತದೆ. ಇದರಿಂದಾಗಿ ಜೀವಸಂಕುಲ ಬಿಸಿಲಿನ ಬೇಗೆಯಿಂದ ಬಳಲುವಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಮತದಾನ ಅತ್ಯಮೂಲ್ಯ; ತಪ್ಪದೆ ಮತದಾನ ಮಾಡಲು ಬಿಬಿಎಂಪಿ ವಿಶೇಷ ಆಯುಕ್ತ ಮನವಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...

ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುಣಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ...