ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಪುನರಾರಂಭ

Date:

Advertisements

ಮಂಗಳವಾರ ರಾತ್ರಿ ‘ನಮ್ಮ ಮೆಟ್ರೋ’ ಹಸಿರು ಮಾರ್ಗದಲ್ಲಿ ಸಂಚರಿಸಿದ ರೋಡ್‌ ಕಮ್‌ ರೈಲ್ ವಾಹನವು ಆಯತಪ್ಪಿದ್ದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. ಸದ್ಯ ಆರ್.ಆರ್.ವಿ ಅನ್ನು ಕ್ರೇನ್ ಸಹಾಯದಿಂದ ಟ್ರ್ಯಾಕ್‌ನಿಂದ ತೆರವುಗೊಳಿಸಲಾಗಿದ್ದು, ಮಧ್ಯಾಹ್ನ 03:40ರ ಬಳಿಕ ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, ಯಶವಂತಪುರದಿಂದ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದ ನಡುವಿನ ಕಾರ್ಯಾಚರಣೆಯನ್ನು ಮಧ್ಯಾಹ್ನ 2 ಗಂಟೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ನಂತರ, ಆರ್.ಆರ್.ವಿ ವಾಹನವನ್ನು ಕ್ರೇನ್‌ನ ಸಹಾಯದಿಂದ ಟ್ರ್ಯಾಕ್‌ನಿಂದ ತೆರವುಗೊಳಿಸಲಾಗಿದೆ. 03:40ಕ್ಕೆ ರೈಲು ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ. ಪ್ರಯಾಣಿಕರಿಗೆ ಇದರಿಂದಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ” ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಆಗಿದ್ದೇನು?
ಇಂದು ರೋಡ್‌ ಕಮ್‌ ರೈಲ್ ವಾಹನವು (ಆರ್‌ಆರ್‌ವಿ) ಡಿಪೋ ಪರೀಕ್ಷೆಯ ನಂತರ, ಪೀಣ್ಯ ಡಿಪೋದಿಂದ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದವರೆಗೆ ಕಾರ್ಯಾಚರಣೆ ಇಲ್ಲದ ವೇಳೆಯಲ್ಲಿ ರಾಜಾಜಿನಗರದ ಬಳಿ ತಿರುವು ಸ್ಥಳಗಳನ್ನು ಟ್ರಯಲ್ ನಡೆಸುವ ಸಮಯದಲ್ಲಿ ವಾಹನ ಹಿಂದಿನ ಚಕ್ರದ ರಸ್ತೆ ಮತ್ತು ರೈಲು ಆಯತಪ್ಪಿತ್ತು. ಇದನ್ನು ಇತರ ಆರ್‌ಆರ್‌ವಿ ವಾಹನದ ಸಹಾಯದಿಂದ ಕೂಡ ಸರಿಪಡಿಸಲು ಸಾಧ್ಯವಾಗಿರಲಿಲ್ಲ.

Advertisements

ಇದೇ ವೇಳೆ ಈ ಸಮಸ್ಯೆಯಿಂದ ಯಶವಂತಪುರದ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಹರಸಾಹಸ ಪಡಬೇಕಾಗಿತ್ತು. ಮೆಟ್ರೋ ಪ್ರಯಾಣಿಕರಿಗಾದ ಅನಾನುಕೂಲತೆಯನ್ನು ಕಡಿಮೆ ಮಾಡಲು, ಮೊದಲು ಯಶವಂತಪುರ ನಂತರ ರಾಜಾಜಿನಗರದಿಂದ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಎಲ್ಲ ಕಾರ್ಯಾಚರಣೆಯ ವಿಧಾನವನ್ನು ಅನುಸರಿಸಿ ಬೆಳಗ್ಗೆ 06.30 ರಿಂದ 2 ಗಂಟೆಗಳವರೆಗೆ ಏಕಮುಖ ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಈಗ ತೆರವುಗೊಳಿಸಲಾಗಿದ್ದು, ಮಧ್ಯಾಹ್ನ 03:40ರ ಬಳಿಕ ಕಾರ್ಯಾಚರಣೆಯನ್ನು ಎಂದಿನಂತೆ ಪುನರಾರಂಭಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X