ಸಾರ್ವಜನಿಕರಿಂದ ಆಕ್ಷೇಪಣೆ: ಬೆಂಗಳೂರಿನ 27 ವಾರ್ಡ್‌ಗಳ ಮತದಾರರ ಪಟ್ಟಿ ‘SIR’ಗೆ ಆದೇಶ

Date:

ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಿಂದ ಕೇಳಿಬಂದ ವ್ಯಾಪಕ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 27 ವಾರ್ಡ್‌ಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ಆದೇಶ ಹೊರಡಿಸಿದೆ.ಈ ಹಿನ್ನೆಲೆಯಲ್ಲಿ, ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಈ ನಿರ್ದಿಷ್ಟ ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಏಪ್ರಿಲ್ 18ರಂದು ಪ್ರಕಟಿಸಲಾಗಿದ್ದ ಅಂತಿಮ ಮತದಾರರ ಪಟ್ಟಿಯನ್ನು ಮುಂದಿನ ಆದೇಶದವರೆಗೆ ತಡೆಹಿಡಿದಿದೆ.

- Advertisement -

ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 28 ರಿಂದ 50ರ ವರೆಗಿನ 23 ವಾರ್ಡ್‌ಗಳು, ಬೆಂಗಳೂರು ದಕ್ಷಿಣ ನಗರಪಾಲಿಕೆಯ ವಾರ್ಡ್ ಸಂಖ್ಯೆ 31 (ಒಂದು ವಾರ್ಡ್) ಹಾಗೂ ಬೆಂಗಳೂರು ಕೇಂದ್ರ ನಗರಪಾಲಿಕೆಯ ವಾರ್ಡ್ ಸಂಖ್ಯೆ 57, 58 ಮತ್ತು 59 ಸೇರಿದಂತೆ ಒಟ್ಟು 27 ವಾರ್ಡ್‌ಗಳಲ್ಲಿ ಈ ಪರಿಷ್ಕರಣೆ ನಡೆಯಲಿದೆ. ಮುಂಬರುವ ಸಾರ್ವತ್ರಿಕ ನಗರಪಾಲಿಕೆ ಚುನಾವಣೆ-2026ರ ದೃಷ್ಟಿಯಿಂದ ಈ ವಾರ್ಡ್‌ಗಳ ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಮತ್ತು ದೂರುಗಳನ್ನು ಪಾರದರ್ಶಕವಾಗಿ ಇತ್ಯರ್ಥಪಡಿಸಲು ಆಯೋಗವು ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ನೈಜ ‘ಕೇರಳ ಸ್ಟೋರಿ’: ಮನುಷ್ಯತ್ವದ ಮೂರು ಅಪರೂಪದ ಕಥೆಗಳು

ಸಂವಿಧಾನದ 243-ZA ವಿಧಿಯಡಿ ಗ್ರೇಟರ್ ಬೆಂಗಳೂರು (ಆಡಳಿತ) ಅಧಿನಿಯಮ 2025ರ ಪ್ರಕರಣ 35 ಹಾಗೂ ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು 2025ರ ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ನೈಜ ಮತ್ತು ದೋಷರಹಿತ ಪರಿಷ್ಕರಣೆಯ ಅಂಗವಾಗಿ ಜೂನ್ 25ರಂದು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ-ಮನೆ ಸಮೀಕ್ಷೆ ಕುರಿತು ವಿಶೇಷ ತರಬೇತಿ ನೀಡಲಾಗುತ್ತದೆ. ತದನಂತರ, ಜೂನ್ 26ರಿಂದ ಅಧಿಕೃತವಾಗಿ ಸಮೀಕ್ಷೆ ಪ್ರಾರಂಭವಾಗಲಿದ್ದು, ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಮತದಾರರ ಮಾಹಿತಿಯನ್ನು ತಳಮಟ್ಟದಲ್ಲಿ ಪರಿಶೀಲಿಸಲಿದ್ದಾರೆ.

ಮನೆ-ಮನೆ ಸಮೀಕ್ಷೆಯ ನಂತರ, ಜುಲೈ 9, 2026ರಂದು ನೂತನ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇದರ ಮೇಲಿನ ಕ್ಲೇಮ್ (ಹಕ್ಕು-ಸಾಧನೆ) ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಅವುಗಳನ್ನು ಕಾನೂನುಬದ್ಧವಾಗಿ ಇತ್ಯರ್ಥಪಡಿಸಲು ಜುಲೈ 10ರಿಂದ ಜುಲೈ 26ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಎಲ್ಲ ಪ್ರಕ್ರಿಯೆಗಳನ್ನು ಕರಾರುವಾಕ್ಕಾಗಿ ಪೂರ್ಣಗೊಳಿಸಿ, ದೋಷರಹಿತವಾದ ಅಂತಿಮ ಮತದಾರರ ಪಟ್ಟಿಯನ್ನು ಜುಲೈ 31ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...