ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಒಂದು ಷೋ ಯಶಸ್ವಿ: ಸಂಘಟನೆಗಳ ವಿರೋಧದ ಬೆನ್ನಲ್ಲೇ ಮುಂದಿನ ಎಲ್ಲಾ ಪ್ರದರ್ಶನ ರದ್ದುಗೊಳಿಸಿದ ಕುನಾಲ್ ಕಮ್ರಾ

Date:

ಬಲಪಂಥೀಯ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ, ಭಾರಿ ಪೊಲೀಸ್ ಬಂದೋಬಸ್ತ್‌ನಲ್ಲಿ ಖ್ಯಾತ ಸ್ಟ್ಯಾಂಡ್‌-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಒಂದು ಹಾಸ್ಯ ಕಾರ್ಯಕ್ರಮ ಭಾನುವಾರ (ಆಗಸ್ಟ್ 2) ನಗರದಲ್ಲಿ ಯಶಸ್ವಿಯಾಗಿ ನಡೆದಿದೆ. ಆದರೆ, ವಿವಾದ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭದ್ರತಾ ಕಾಳಜಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ನಿಗದಿಯಾಗಿದ್ದ ಉಳಿದ ಎಲ್ಲಾ ಪ್ರದರ್ಶನಗಳನ್ನು ಸ್ವತಃ ಕಮ್ರಾ ಅವರೇ ರದ್ದುಗೊಳಿಸಿದ್ದಾರೆ. ಇದರಿಂದಾಗಿ ಕಮ್ರಾ ಅವರ ಎಲ್ಲ ಷೋಗಳು ರದ್ದಾಗಿವೆ ಎಂಬ ಗೊಂದಲಗಳಿಗೆ ತೆರೆ ಬಿದ್ದಿದೆ.

- Advertisement -

ವೇಳಾಪಟ್ಟಿಯ ಪ್ರಕಾರ ಆಗಸ್ಟ್ 1ರಂದು ನಡೆಯಬೇಕಿದ್ದ ಪ್ರದರ್ಶನವನ್ನು ಭಾನುವಾರಕ್ಕೆ ಮುಂದೂಡಲಾಗಿತ್ತು. ಈ ಷೋ ಕೋರಮಂಗಲದ ‘ದಿ ಅಂಡರ್‌ಗ್ರೌಂಡ್ ಕಾಮಿಡಿ ಕ್ಲಬ್’ನಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಪೂರ್ಣಗೊಂಡಿತು. ಪ್ರೇಕ್ಷಕರನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಿ, ಪೊಲೀಸ್ ಸರ್ಪಗಾವಲು ಹಾಗೂ ಬ್ಯಾರಿಕೇಡ್‌ಗಳ ನಡುವೆ ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಸೂತ್ರವಾಗಿ ಪ್ರದರ್ಶನ ಮುಗಿದ ಬಳಿಕ ಕಮ್ರಾ ಅವರು ಭದ್ರತೆ ಒದಗಿಸಿದ ಬೆಂಗಳೂರು ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಆದರೆ, ಆಗಸ್ಟ್ 3ರಿಂದ 6ರವರೆಗೆ ವೈಟ್‌ಫೀಲ್ಡ್‌ನ ‘ಉರು’ (URU) ನಲ್ಲಿ ಕಮ್ರಾ ಅವರ ನಾಲ್ಕು ಪ್ರದರ್ಶನಗಳು ನಿಗದಿಯಾಗಿದ್ದವು. ಕಮ್ರಾ ತಮ್ಮ ಹಿಂದಿನ ಪ್ರದರ್ಶನಗಳಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದು, ಅವರಿಂದ ಕೋಮು ಸೌಹಾರ್ದತೆಗೆ ಧಕ್ಕೆಯಾಗಲಿದೆ ಎಂದು ಆರೋಪಿಸಿ ‘ಹಿಂದೂ ರಾಷ್ಟ್ರ ಸಮನ್ವಯ ಸಮಿತಿ’ಯು ಈ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿತ್ತು.

ವಿರೋಧ ವ್ಯಕ್ತವಾದ ತಕ್ಷಣ ಆಯೋಜಕರು ವೈಟ್‌ಫೀಲ್ಡ್‌ನ ಷೋಗಳನ್ನು ಕೋರಮಂಗಲದ ಕ್ಲಬ್‌ಗೆ ಸ್ಥಳಾಂತರಿಸಲು ಯತ್ನಿಸಿದ್ದರು. ಟಿಕೆಟ್ ಹಣ ಹಿಂತಿರುಗಿಸಿ (Refund) ಕೋರಮಂಗಲದ ಷೋಗಳಿಗೆ ಹೊಸದಾಗಿ ಟಿಕೆಟ್ ಖರೀದಿಸುವಂತೆಯೂ ಸೂಚಿಸಿದ್ದರು. ಆದರೆ, ಹೆಚ್ಚುತ್ತಿರುವ ವಿವಾದವನ್ನು ಗಮನಿಸಿ, ಅಂತಿಮವಾಗಿ ಆ ಮುಂದಿನ ಎಲ್ಲಾ ಷೋಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ. ಈ ಕುರಿತು ಖುದ್ದಾಗಿ ಕಮ್ರಾ ಅವರೇ ವೈಟ್‌ಫೀಲ್ಡ್ ಪೊಲೀಸರಿಗೆ ಭಾನುವಾರ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮಗಳಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ, ‘ಹಾಸ್ಯ ಮತ್ತು ಸಂಸ್ಕೃತಿ’ಯ ಬಗ್ಗೆ ಮುಕ್ತವಾಗಿ ಚರ್ಚಿಸುವಂತೆ ಕಮ್ರಾ ಆಗಸ್ಟ್ 1ರಂದು ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಬಳಿ ಬಲಪಂಥೀಯ ಸಂಘಟನೆಗಳಿಗೆ ಆಹ್ವಾನ ನೀಡಿದ್ದರು. ತಾವು ಪೊಲೀಸ್ ಠಾಣೆಯ ಬಳಿ ಇರುವ ಫೋಟೊವನ್ನೂ ಹಂಚಿಕೊಂಡಿದ್ದ ಅವರು, ಚರ್ಚೆಗೆ ಸಂಘಟನೆಯ ಯಾರೊಬ್ಬರೂ ಬರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ಪ್ರದರ್ಶನ ಬಿಗಿ ಭದ್ರತೆಯಲ್ಲಿ ನಡೆದರೆ, ಉಳಿದ ಷೋಗಳನ್ನು ವಿವಾದದ ಕಾರಣಕ್ಕೆ ರದ್ದುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...