ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿಯು, ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿದೆ. ಸಿಬಿಐ, ಎನ್‌ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ 35 ಅಧಿಕಾರಿಗಳಿದ್ದು, ಕರ್ನಾಟಕದಿಂದ ಪ್ರಣಬ್ ಮೊಹಂತಿ ಮಾತ್ರ ಇದ್ದಾರೆ.
ಧರ್ಮಸ್ಥಳ ಗ್ರಾಮದ ವಿವಿಧೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ರಚಿಸಿರುವ ಎಸ್‌ಐಟಿಯನ್ನು ಪ್ರಣಬ್ ಮೊಹಂತಿ ಅವರು ಮುನ್ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?
ಎಸ್ಐಟಿ ಗೆ ಬೇರೆ ಅಧಿಕಾರಿಯ ನೇಮಕ ಕುರಿತು ಚರ್ಚೆ: ಡಾ. ಜಿ ಪರಮೇಶ್ವರ್
ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ನೇಮಕವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಮೊಹಾಂತಿಯವರು ಕೇಂದ್ರ ಸೇವೆಗೆ ಹೋದರೆ ಬೇರೆ ಅಧಿಕಾರಿಯನ್ನು ಎಸ್ಐಟಿ ಗೆ ನೇಮಕ ಮಾಡುವ ಬಗ್ಗೆ ಚರ್ಚೆ
ಮಾಡುತ್ತೇವೆ. ಕಾನೂನು ಪ್ರಕಾರ ನಡೆದುಕೊಳ್ಳುತ್ತೇವೆ. ಕೇಂದ್ರಕ್ಕೆ ಹೋದರೂ ಎಸ್ಐಟಿಯಲ್ಲಿ ಇರಲು ಅವಕಾಶ ಇದೆಯಾ ಎಂದೂ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ.
