ಪಿಟಿಸಿಎಲ್ ಕಾಯ್ದೆ ತಿದ್ದುಪಡಿ: 10 ದಿನಗಳಲ್ಲಿ ನ್ಯಾಯ ಒದಗಿಸದಿದ್ದರೆ ಅಹೋರಾತ್ರಿ ಧರಣಿ; ಹೋರಾಟ ಸಮಿತಿ ಎಚ್ಚರಿಕೆ

Date:

​ಪಿಟಿಸಿಎಲ್ (PTCL) ಕಾಯ್ದೆ ತಿದ್ದುಪಡಿಯ ನಂತರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯವಾಗುತ್ತಿದ್ದು, ರಾಜ್ಯ ಸರ್ಕಾರ 10 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ‘ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಎಚ್ಚರಿಕೆ ನೀಡಿದೆ.

- Advertisement -

ಕಾಯ್ದೆ ತಿದ್ದುಪಡಿಯಾದರೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ, ಕಾನೂನುಬಾಹಿರವಾಗಿ ದಲಿತರ ಮಂಜೂರಾದ ಜಮೀನುಗಳನ್ನು ಕಬಳಿಸಲಾಗುತ್ತಿದೆ. ಕಂದಾಯ ಇಲಾಖೆ ಅಧಿಕಾರಿಗಳು (ಎಸಿ, ಡಿಸಿ) ಹಾಗೂ ನ್ಯಾಯಾಲಯಗಳಿಂದಲೂ ತಮಗೆ ಅನ್ಯಾಯವಾಗುತ್ತಿದ್ದು, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

​ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಭೂಮಿ ಕಳೆದುಕೊಂಡವರ ಸಮಸ್ಯೆ ಬಗೆಹರಿಸಿಲ್ಲ. ಹೀಗಾಗಿ, ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ, ಮುಂದಿನ 10 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಸಮಿತಿ ಎಚ್ಚರಿಸಿದೆ.

​ಸಮಿತಿಯ ಪ್ರಮುಖ ಬೇಡಿಕೆಗಳು:
​ಕಲಂ 5(1)D ರದ್ದತಿಗೆ ಆಗ್ರಹ: 2023ರ ತಿದ್ದುಪಡಿಯಲ್ಲಿ ಸೇರಿಸಲಾಗಿರುವ ಕಲಂ 5(1)D ಯನ್ನು ಕೈಬಿಡಬೇಕು.

​ಎಲ್ಲಾ ಮಂಜೂರಾತಿ ಭೂಮಿಗಳ ಸೇರ್ಪಡೆ: ಪಿಟಿಸಿಎಲ್ ಕಾಯ್ದೆ ಕಲಂ 3(1) B ಅಡಿಯಲ್ಲಿ ಬರುವ ತೋಟಿ, ನಿರಗಂಟಿ, ತಳವಾರಿ, ಕುಲವಾಡಿಕೆ ಇನಾಂ ಭೂಮಿಗಳು, ಕಿಮ್ಮತ್ತು, ಜಿಎಂಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಮಂಜೂರಾದ ಭೂಮಿ ಹಾಗೂ ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುತ್ತವೆ ಎಂದು ಸ್ಪಷ್ಟಪಡಿಸಬೇಕು.

​ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ: 2023ರ ತಿದ್ದುಪಡಿ ಕಾಯ್ದೆಯನ್ನು ಉಲ್ಲಂಘಿಸುತ್ತಿರುವ ಕಂದಾಯ ಇಲಾಖೆಯ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತಿತರ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

​ಸರ್ಕಾರಿ ವಕೀಲರ ವಜಾಗೆ ಒತ್ತಾಯ: ನ್ಯಾಯಾಲಯಗಳಲ್ಲಿ ಕಾಯ್ದೆ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾದ ಆದೇಶಗಳು ಬರಲು ಕಾರಣರಾದ, ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಸರ್ಕಾರದ ಪರ ವಕೀಲರನ್ನು (ಅಭಿಯೋಜಕರು) ಹುದ್ದೆಯಿಂದ ತೆಗೆದುಹಾಕಬೇಕು.

​ವಿಶೇಷ ನ್ಯಾಯಾಲಯ ಸ್ಥಾಪನೆ: ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸುವ ಹೊಣೆ ಹೊತ್ತಿರುವ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದಲೇ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಮೇಲುಸ್ತುವಾರಿ ಮೂಲಕ ನ್ಯಾಯ ಒದಗಿಸಬೇಕು.

​ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಗೌರವಾಧ್ಯಕ್ಷ ಬಿ.ಎಂ. ವೆಂಕಟೇಶ್, ಉಪಾಧ್ಯಕ್ಷ ಸಿ. ಶಾಂತಕುಮಾರ್, ಕಾರ್ಯದರ್ಶಿ ಪಿ. ವೆಂಕಟೇಶ್, ಹಾಗೂ ಪದಾಧಿಕಾರಿಗಳಾದ ಮಂಜುನಾಥ್ ಶಿರಾ, ರಮೇಶ್ ಎಂ. ನಾಗವಾರ, ನಾರಾಯಣಸ್ವಾಮಿ, ಈಶ್ವರಪ್ಪ, ಚಂದ್ರು ಬಂಗ್ಲೆ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...