ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

Date:

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು.

ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆಯಷ್ಟೇ ಆಗಿತ್ತು.

ಇಂದು ಬೆಂಗಳೂರು ನಗರದ ಹಲವಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ ಉದ್ಯಾನನಗರಿಗೆ ತಂಪೆರೆದಿದೆ. ಬೆಂಗಳೂರು ಉತ್ತರ, ದಕ್ಷಿಣ ಭಾಗದ ಹಲವೆಡೆ ತುಂತುರು ಮಳೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.

ಮಧ್ಯಾಹ್ನವೇ ಆರಂಭವಾಗಿರುವ ಭರ್ಜರಿ ಮಳೆಯಿಂದ ರಾಜಾಜಿನಗರ, ಮಲ್ಲೇಶ್ವರಂ, ರೇಸ್ ಕೋರ್ಸ್ ಸೇರಿ ಹಲವೆಡೆ ಮಳೆ ಸುರಿದಿದೆ. ಈ ಭಾಗದಲ್ಲಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ಮೋಡ ಕವಿದ ವಾತಾವರಣ ಮುಂದುವರಿದಿದ್ದು ರಾತ್ರಿ ಕೂಡ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆ?

ಬೆಂಗಳೂರು ನಗರದ ಕಂಟೋನ್ಮೆಂಟ್, ರಾಜಾಜಿನಗರ, ಮಲ್ಲೇಶ್ವರಂ, ವಸಂತ ನಗರ, ಬಾಣಸವಾಡಿ, ಎಚ್‌ಬಿಆರ್ ಲೇಔಟ್, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್, ಜಯನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ, ನಾಯಂಡಹಳ್ಳಿ, ರಾಜಾಜಿನಗರ, ಶ್ರೀರಾಮ್‌ಪುರ, ಮಹಾಕವಿ ಕುವೆಂಪು ರಸ್ತೆ, ಸದಾಶಿವನಗರ, ವೈಟ್‌ಫೀಲ್ಡ್, ಶಿವಾಜಿನಗರ, ಹೆಬ್ಬಾಳ, ಮತ್ತಿಕೆರೆ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊತ್ನೂರು, ರಾಜರಾಜೇಶ್ವರಿ ನಗರ, ಉತ್ತರಹಳ್ಳಿ ಸೇರಿದಂತೆ ಇಂದು ಮಧ್ಯಾಹ್ನ ಕೆಲಹೊತ್ತು ಮಳೆಯಾಗಿದೆ.

ಸೋಷಿಯಲ್ ಮೀಡಿಯಾಲ್ಲಿ ಟ್ರೆಂಡಿಂಗ್ ಆದ ಬೆಂಗಳೂರು ಮಳೆ!

ಬೆಂಗಳೂರಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆಗೆ ಬೆಂಗಳೂರಿನ ಜನತೆಗೆ ಒಂಚೂರು ನೆಮ್ಮದಿ ತಂದಿದೆ. ಮಳೆಯ ಫೋಟೋ, ವಿಡಿಯೋಗಳನ್ನು ಜನರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

#BengaluruRains ಅನ್ನೋ ಹ್ಯಾಷ್‌ಟ್ಯಾಗ್‌ ಜೊತೆಗೆ ಮಳೆಯ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಪುಟ್ಟ ಮಕ್ಕಳು ಮೊದಲ ಮಳೆಯಲ್ಲೇ ಮೈ ಒದ್ದೆ ಮಾಡಿಕೊಂಡು ಖುಷಿ ಪಡುತ್ತಿದ್ದಾರೆ.

ಮೊದಲ ಮಳೆಗೆ ಟ್ರಾಫಿಕ್ ಜಾಮ್

ಮೊದಲ ಮಳೆಗೆ ಹಲವು ಕಡೆಯ ರಸ್ತೆಗಳಲ್ಲಿ ವಿಪರೀತ ನೀರು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯಿಂದಾದ ಟ್ರಾಫಿಕ್ ಜಾಮ್ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡುತ್ತಿದ್ದಾರೆ.

“ಮಾನ್ಯತಾ ಬಳಿ ರಸ್ತೆಯಲ್ಲಿ ನೀರು ನಿಂತಿರುವುದರಿಂದ. ನಾಗವರ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರ ವಿರುತ್ತದೆ, ದಯಮಾಡಿ ಸಹಕರಿಸಿ” ಎಂದು ರಸ್ತೆಯಲ್ಲಿ ನೀರು ನಿಂತಿರುವ ಫೋಟೋವನ್ನು ಟ್ರಾಫಿಕ್ ಪೊಲೀಸರು ಹಂಚಿಕೊಂಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಲಾಗಿದೆ: ಡಿಸಿಎಂ ಡಿಕೆಶಿ

"ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ...

ಬೆಂಗಳೂರಿನ ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಶಾಶ್ವತ ನಿರ್ವಹಣಾ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಇಂದು ಸಿಟಿ ರೌಂಡ್ಸ್‌ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ...

ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ....

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ...