ರಾಮೇಶ್ವರಂ ಕೆಫೆ ಪ್ರಕರಣ | ಕಪೋಲಕಲ್ಪಿತ ವರದಿ ಬಿತ್ತರಿಸದಿರಿ: ಮಾಧ್ಯಮಗಳಿಗೆ ಕಮಿಷನರ್ ಎಚ್ಚರಿಕೆ

Date:

Advertisements

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಜೆ ಹಳ್ಳಿಯಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್, “ಮಾಧ್ಯಮದ ಮಿತ್ರರಲ್ಲಿ ವಿನಂತಿ. ತನಿಖೆಯ ವಿವರಗಳನ್ನು ಅಥವಾ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸದಿರಿ. ತನಿಖಾ ತಂಡಗಳು ಸ್ವತಂತ್ರವಾಗಿ ಮತ್ತು ವೃತ್ತಿಪರವಾಗಿ ಕೆಲಸ ಮಾಡಲು ಅನುವು ಮಾಡಿಕೊಡಿ” ಎಂದು ತಿಳಿಸಿದ್ದಾರೆ.

Advertisements

“ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಬರೀ ಮೂರು ವರ್ಷದಲ್ಲೇ ಸೈಬರ್ ಕ್ರೈಂ ಪ್ರಕರಣ ದುಪ್ಪಟ್ಟು!

“ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕು” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X