ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

Date:

Advertisements

ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಕಾರು ಅಪಘಾತಗೊಂಡು, ಬೈಕ್ ಸವಾರ ಬಲಿಯಾಗಿದ್ದಾನೆ.

ಮೃತಪಟ್ಟ ಯುವಕನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35)  ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ‌ ದೇವಸಂದ್ರ ವಿನಾಯಕ‌ ದೇವಸ್ಥಾನ ಬಳಿ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಿನ್ನೆಲೆಯಲ್ಲಿ. ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ಗೆ ಗುದ್ದಿದೆ.

Advertisements
prakash
ಮೃತಪಟ್ಟ ಪ್ರಕಾಶ್ (35)

ಕಾರಿನ ಡೋರ್‌ ತಗುಲಿ ಕೆಳಗೆ ಬಿದ್ದ ಬೈಕ್‌ ಸವಾರನಿಗೆ ಅವರ ಹಿಂದೆಯೇ ಬರುತ್ತಿದ್ದ ಖಾಸಗಿ ಬಸ್‌ ಕೂಡ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಪ್ರಕಾಶ್‌ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕಾರ್ಯಕರ್ತರು ಎತ್ತಿಕೊಂಡು ಆಟೋದಲ್ಲಿ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಪ್ರಕಾಶ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಪ್ರಕಾಶ್ ಅವರು ಬಿಜೆಪಿ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬರ ಪರಿಹಾರ | ಎಲ್ಲದಕ್ಕೂ ರಾಜ್ಯಗಳು ನಮ್ಮತ್ರ ಬರಬೇಕಾ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

ಸ್ಥಳಕ್ಕೆ ಕೆ.ಆರ್. ಪುರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X