ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್‌ ಸಾಬೂನು ಉತ್ಪಾದನೆ

Date:

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು(ಕೆಎಸ್‌ಡಿಎಲ್‌) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದ್ದು, ಜನವರಿ ತಿಂಗಳೊಂದರಲ್ಲೇ 4,894 ಟನ್‌ ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

- Advertisement -

ಸಾಬೂನು ಮತ್ತು ಮಾರ್ಜಕಗಳ ಉತ್ಪಾದನೆ ಬಗ್ಗೆ ಬೆಂಗಳೂರು ನಗರದಲ್ಲಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಕೆಎಸ್‌ಡಿಎಲ್‌ 2023ರ ನವೆಂಬರ್‌ನಲ್ಲಿ 4,144 ಟನ್, 2025ರ ಮಾರ್ಚ್‌ನಲ್ಲಿ 4,486 ಟನ್, 2025ರ ಡಿಸೆಂಬರ್‌ನಲ್ಲಿ 4,735 ಟನ್ ಸಾಬೂನು ಮತ್ತು ಮಾರ್ಜಕ ಉತ್ಪಾದಿಸಿದ್ದು ಈವರೆಗಿನ ಗರಿಷ್ಠವಾಗಿತ್ತು. ಆದರೆ 2026ರ ಜನವರಿಯಲ್ಲಿ 3,798 ಟನ್‌ ಸಾಬೂನು, 941 ಟನ್‌ ಮಾರ್ಜಕ ಮತ್ತು 155 ಟನ್‌ಗಳಷ್ಟು ಪ್ರಸಾದನ ಸಾಮಗ್ರಿಗಳನ್ನು ಉತ್ಪಾದಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“ಉತ್ತರಭಾರತ ಮತ್ತು ವಿದೇಶಗಳಲ್ಲಿ ಮಾರುಕಟ್ಟೆ ವಿಸ್ತರಣೆ ಹಾಗೂ ಬ್ರ್ಯಾಂಡಿಂಗ್‌ ಬಲವರ್ಧನೆಗೆ ಕ್ರಮ ತೆಗೆದುಕೊಂಡ ಪರಿಣಾಮ ಕೆಎಸ್‌ಡಿಎಲ್‌ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರಿಂದಲೇ ಉತ್ಪಾದನೆ ಏರಿಕೆಯಾಗುತ್ತಿದೆ” ಎಂದಿದ್ದಾರೆ.

ಕೆಎಸ್‌ಡಿಎಲ್‌ ಅಧ್ಯಕ್ಷ ಸಿ ಎಸ್‌ ನಾಡಗೌಡ ಮಾತನಾಡಿ, “ನಮ್ಮ ನಿಗಮದ 45ಕ್ಕೂ ಹೆಚ್ಚು ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸಲಾಗುವುದು. 2030ರ ವೇಳೆಗೆ ವಾರ್ಷಿಕ ವಹಿವಾಟನ್ನು ₹5,000 ಕೋಟಿಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯ; ಬಜೆಟ್ ಪ್ರತಿ ದಹಿಸಿ ಪ್ರತಿಭಟನೆ

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್‌ ಪಿಕೆಎಂ ಮಾತನಾಡಿ, “ಹಳೆಯ ಯಂತ್ರಗಳನ್ನೇ ಗರಿಷ್ಠ ಮಟ್ಟದಲ್ಲಿ ಬಳಕೆ ಮಾಡಿಕೊಂಡು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...