ವಿಶೇಷ ಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭ ಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯವಿದೆ : ಡಾ ಸಿ ಎಸ್ ದ್ವಾರಕಾನಾಥ್

Date:

  • ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ
  • ‘ಎಪಿಡಿ’ಯಿಂದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ ಕಾರ್ಯಾಗಾರ

‘ವಿಶೇಷ ಚೇತನರ ಊನತೆಗಳನ್ನೇ ಕುಂಟ, ಕುರುಡ ಎಂದು ಬೈಗುಳಗಳನ್ನಾಗಿ ಪರಿವರ್ತಿಸಿಕೊಂಡಿರುವ ಸಭ್ಯ ಸಮಾಜಕ್ಕೆ ಇವತ್ತು ಸುಲಭ ಲಭ್ಯತೆಯ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಇದೆ’ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ‌‌. ಸಿ.ಎಸ್.ದ್ವಾರಕಾನಾಥ್‌ರವರು ಹೇಳಿದರು.

- Advertisement -

ಬೆಂಗಳೂರಿನ ಪಾಲನಾ ಭವನದಲ್ಲಿ ‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ’ ವತಿಯಿಂದ ಆಯೋಜಿಸಲಾಗಿದ್ದ ಸುಲಭಲಭ್ಯತೆ ಕುರಿತ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಾಯಕ ಯೋಗಿ ಬಸವಣ್ಣನವರ ತತ್ವಗಳನ್ನು ನೆನೆದ ಅವರು, ವಿಕಲಚೇತನರಿಗೆ ಪ್ರೀತಿ, ಕಾಳಜಿ ಬೇಕಿದೆಯೇ ವಿನಃ ಕರುಣೆ, ದಯೆ ಬೇಕಾಗಿಲ್ಲ ಎಂದು ಸಮಾಜಕ್ಕೆ ಕರೆ ನೀಡಿದರು.

ಕಾರ್ಯಾಗಾರದಲ್ಲಿ ಸುಲಭ ಲಭ್ಯತೆಯ ಕುರಿತು ಮಾಹಿತಿ ನೀಡಲು ಆರಂಭಿಸಲಾದ ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.

333

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ವಿಶೇಷ ಚೇತನರ ಆಯೋಗದ ರಾಜ್ಯ ಆಯುಕ್ತೆ ಶ್ರೀಮತಿ ಲತಾ ಕುಮಾರಿ ಮಾತನಾಡಿ, “ಎಪಿಡಿ ಸಂಸ್ಥೆ ನೀಡುತ್ತಿರುವ ತರಬೇತಿ ಕಾರ್ಯಾಗಾರಗಳು ರಾಜ್ಯಾದ್ಯಂತ ಪಸರಿಸಬೇಕಿದೆ. ಪ್ರತಿಯೊಬ್ಬ ಮನುಷ್ಯನಿಗೂ ನ್ಯೂನ್ಯತೆಗಳಿವೆ. ಅವುಗಳನ್ನು ಮೀರಿ ಸಮಾಜದಲ್ಲಿ ಬೆಳೆಯಬೇಕಿದ್ದು, ಘನತೆಯ ಬದುಕನ್ನು ಕಟ್ಟಿಕೊಳ್ಳಲು ಪ್ರತಿಯೊಬ್ಬರು ಆರ್ಥಿಕವಾಗಿ ಬಲಿಷ್ಠವಾಗಬೇಕಿದೆ. ಉದ್ಯೋಗ ಇವತ್ತು ಪುರುಷ ಲಕ್ಷಣ ಎನ್ನುವುದಕ್ಕಿಂತ ಸ್ತ್ರೀ ಪುರುಷರಿಬ್ಬರ ಲಕ್ಷಣವೆಂದು ಬದಲಾಯಿಸಿಕೊಳ್ಳಬೇಕಿದೆ‌” ಎಂದರು‌.

ಇದೇ ವೇಳೆ ಮಾತನಾಡಿದ ಎಪಿಡಿಯ ಕಾರ್ಯದರ್ಶಿ ಜೇಕಬ್ ಕುರಿಯನ್‌, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ) ಸುಮಾರು 64 ವರ್ಷಗಳಿಂದ ವಿಕಲಚೇತನರ,ದುರ್ಬಲರ ಸಬಲೀಕರಣಕ್ಕಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ಸಮಾಜದಲ್ಲಿ ಅಂಗವೈಕಲ್ಯತೆಯ ಕುರಿತು ತಪ್ಪು ಅಭಿಪ್ರಾಯ ಇರುವುದನ್ನು ಗುರುತಿಸಿದೆ. ಇಂದು ಸುಲಭಲಭ್ಯತೆಯ ಅಗತ್ಯತೆ ಕೇವಲ ವಿಕಲಚೇತರಿಗೆ ಮಾತ್ರ ಇದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿದೆ. ಈ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಬೇಕಾದ ಅನಿವಾರ್ಯತೆ ಈಗಿನ ಸಮಾಜದಲ್ಲಿ ಎದ್ದು ಕಾಣುತ್ತಿದೆ ಎಂದರು.

ಇಂದು ಮಕ್ಕಳು, ಗರ್ಭಿಣಿ ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಕಾಯಿಲೆ ಪೀಡಿತರಿಗೂ ಆಕ್ಸೆಸಿಬಿಲಿಟಿ ಅಗತ್ಯತೆ ಇದೆ ಎಂಬುದನ್ನು ಮನಗಾಣಬೇಕಿದೆ‌. ಸುಲಭಲಭ್ಯತೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿರುವುದರಿಂದಲೇ ವಿದೇಶಗಳಲ್ಲಿ ವಿಕಲಚೇತನರು, ಹಿರಿಯ ನಾಗರಿಕರು ಮಾಲ್, ಸಿನೆಮಾ ಥಿಯೇಟರ್, ಕಂಪೆನಿಗಳು ಸೇರಿದಂತೆ ಔದ್ಯೋಗಿಕ ರಂಗದಲ್ಲಿ ಲವಲವಿಕೆಯಿಂದ ಓಡಾಡುತ್ತಿದ್ದಾರೆ. ವಿಪರ್ಯಾಸವೆಂದರೆ ಭಾರತದಲ್ಲಿ ಸಾರಿಗೆ, ಉದ್ಯೋಗ,ಉದ್ಯಮ ಹಾಗೂ ವಿಹಾರ ಕೇಂದ್ರಗಳಲ್ಲಿಯೂ ವಿಕಲಚೇತನರು, ಗರ್ಭಿಣಿಯರು ಹಾಗೂ ಹಿರಿಯ ನಾಗರಿಕರು ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಹೆಚ್ಚಿನವರು ಮನೆಗಳಲ್ಲಿಯೇ ಉಳಿದುಕೊಳ್ಳಲು ಬಯಸುತ್ತಾರೆ. ಈ ಪರಿಸ್ಥಿತಿಯಲ್ಲಿ ಬದಲಾವಣೆ ಕಂಡು ಬರಬೇಕಿದ್ದಲ್ಲಿ ಪೂರಕವಾದ ಸುಲಭ ಲಭ್ಯತೆ ಸೌಕರ್ಯಗಳನ್ನು ಒದಗಿಸಲು ಸಮಾಜದಲ್ಲಿ ಕೈ ಜೋಡಿಸಬೇಕಿದ್ದು ಆಗ ಮಾತ್ರ ಕರ್ನಾಟಕವನ್ನು ಅಕ್ಸೆಸ್ಸೆಸೆಬಿಲಿಟಿಯಲ್ಲಿ ಮಾದರಿ ರಾಜ್ಯವನ್ನಾಗಿ ಮಾಡಲು ಸಾಧ್ಯ ಎಂದರು.

ಇಮೇಜ್ 1

ಕಾರ್ಯಾಗಾರದಲ್ಲಿ 15ಕ್ಕೂ ಹೆಚ್ಚು ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗವಹಿಸಿದ್ದು, ಮೂರುದಿನಗಳ ಕಾಲ ಆಕ್ಸೆಸ್ಸೆಬಿಲಿಟಿ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

‘ಸುಲಭ ಲಭ್ಯತೆ’ ಎಂದರೇನು?

ಸುಲಭ ಲಭ್ಯತೆ ಅಥವಾ ಆಕ್ಸೆಸಿಬಿಲಿಟಿ ಎಂದರೆ ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರು ಸೇರಿದಂತೆ ಇತರ ಜನರಿಗೆ ಸಾರಿಗೆ, ಉದ್ಯೋಗ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಪೂರಕವಾದ ವಾತಾವರಣವನ್ನು ಕಲ್ಪಿಸುವುದಾಗಿದೆ. ಇನ್ನೊಂದು ಅರ್ಥದಲ್ಲಿ ವಿಕಲಚೇತನರಿಗೆ ಸುಲಭವಾಗಿ ಬಳಸಲು ಸಾಧ್ಯವಾಗುವ ಹಾಗೆ ಉತ್ಪನ್ನಗಳು, ಸಾಧನಗಳು, ಸೇವೆಗಳು, ವಾಹನಗಳು ಅಥವಾ ಪರಿಸರವನ್ನು ವಿನ್ಯಾಸಗೊಳಿಸುವುದಾಗಿದೆ. ವ್ಹೀಲ್ ಚೇರ್, ವಾಕರ್, ಭೂತಗನ್ನಡಿ, ರ‌್ಯಾಂಪ್ ರೈಲಿಂಗ್, ಲಿಫ್ಟ್, ವಿಕಲಚೇತನರು ಬಳಸಬಹುದಾದ ಶೌಚಾಲಯಗಳು, ರಸ್ತೆಯಲ್ಲಿ ಇಳಿಜಾರು ವ್ಯವಸ್ಥೆಗಳು, ಸಾರಿಗೆಗಳಲ್ಲಿ ಹತ್ತಲು ಬೇಕಾಗುವ ರ‌್ಯಾಂಪ್‌ಗಳ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವುದಾಗಿದೆ.

ವಿಕಲಚೇತನರಿಗಾಗಿ ವಿಶಿಷ್ಟ ಆ್ಯಪ್

ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವ ಸುಲಭಲಭ್ಯತೆಗಳಾದ ರ‌್ಯಾಂಪ್ ರೈಲಿಂಗ್, ವ್ಹೀಲ್ ಚೇರ್, ಲಿಫ್ಟ್ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ವಿಶೇಷ ಚೇತನರಿಗೆ ಬಳಸಲು ಸುಲಭವಾಗುವಂತಹ ಅಪ್ಲೀಕೇಶನ್ ನಿರ್ಮಿಸುತ್ತಿರುವ ಕುರಿತು ಜೇಕಬ್ ಕುರಿಯನ್ ಮಾಹಿತಿ ನೀಡಿದರು.

ಕಾರ್ಯಾಗಾರದ ಆರಂಭದಲ್ಲಿ ಎಪಿಡಿ ಸಿಬ್ಬಂದಿ ಮುನಿ ಚೌಡಪ್ಪರವರು ಸ್ವಾಭಿಮಾನ ಗೀತೆಯನ್ನು ಹಾಡಿದರು. ಎಪಿಡಿ ನಿರ್ದೇಶಕರಾದ ಶಿವ. ಸಿ. ಹಿರೇಮಠ್‌ರವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು‌. ಉಪ ನಿರ್ದೇಶಕರಾದ ಎಸ್. ಬಾಬು‌ರವರು ಕಾರ್ಯಾಗಾರದ ಉದ್ದೇಶ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಶಿವಪ್ಪ. ಬಿ. ಎನ್ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...