ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಂದ ಸರ್ವೆ ಕಾರ್ಯ ಆರಂಭ

Date:

ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಜಾಗದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ.

- Advertisement -

ಸುಮಾರು 180 ಮನೆಗಳ ಸರ್ವೆ ಕಾರ್ಯ ಆರಂಭಿಸಿರುವ ಅಧಿಕಾರಿಗಳು ಸ್ಥಳೀಯರಿಂದ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಸರ್ವೆ ಕಾರ್ಯ ನಡೆಸಿ ಸ್ಥಳೀಯ ಪರಿಸ್ಥಿತಿ ಕುರಿತು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

ಸ್ಥಳಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಸ್ಥಳಕ್ಕೆ ಭೇಟಿ ಮಾಡಿ ಸ್ಥಳೀಯರ ಅಹವಾಲುಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾನವ ಹಕ್ಕುಗಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಮನೆಗಳನ್ನು ತೆರವು ಮಾಡಿರುವ ಕುರಿತು ಜಿಬಿಎ ಬಳಿ ವರದಿ ಕೇಳಿದ್ದೇವೆ. ನಮ್ಮ ಆಯೋಗದಲ್ಲಿ ಇರುವ ಪೊಲೀಸ್ ಘಟಕದ ಎಡಿಜಿಪಿ ನೇತೃತ್ವದಲ್ಲಿ ತನಿಖೆ ಮಾಡುತ್ತೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

ಸ್ಥಳೀಯರಿಂದ ದಾಖಲಾತಿ ಪಡೆಯುತ್ತೇವೆ. ಅವುಗಳ ಪರಿಶೀಲನೆ ಹಾಗೂ ತನಿಖೆ ಆನಂತರ ನಾವು ಸರಕಾರಕ್ಕೆ ಶಿಫಾರಸುಗಳನ್ನು ಮಾಡುತ್ತೇವೆ ಎಂದು ಅವರು ಹೇಳಿದರು.

ಮನೆಗಳನ್ನು ತೆರವು ಮಾಡಿದ ನಂತರ ಸ್ಥಳೀಯರಿಗೆ ಪರ್ಯಾಯ ವ್ಯವಸ್ಥೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾಳಜಿ ಕೇಂದ್ರಗಳು ತುಂಬಾ ದೂರದ ಪ್ರದೇಶದಲ್ಲಿ ಇದೆ ಎಂದು ಸ್ಥಳೀಯರು ತಿಳಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಪೊಲೀಸರು ತನಿಖೆಗೆ ಬಂದಾಗ ನಿಮ್ಮ ಬಳಿ ಇರುವ ದಾಖಲೆಗಳನ್ನು ಅವರಿಗೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಶ್ಯಾಮ್ ಭಟ್ ಹೇಳಿದರು.

ಡಿಸಿಎಂ ಸಭೆ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ 3.00 ಗಂಟೆಗೆ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕದ ಸರಕಾರಿ ಜಾಗದಲ್ಲಿ ಅನಧಿಕೃತ ನಿರ್ಮಾಣಗಳ ತೆರವು ಜಾಗಕ್ಕೆ ಭೇಟಿ ನೀಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...