ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಹೈಕೋರ್ಟ್‌ ತೀವ್ರ ಬೇಸರ

Date:

  • ಕುದುರೆ ವ್ಯಾಪಾರ ಮೆರೆದಾಡುತ್ತಿದ್ದು, ಇದನ್ನೆಲ್ಲ ಹೇಳಲು ನನಗೆ ನಾಚಿಕೆ: ನ್ಯಾ. ಸಂದೇಶ್‌
  • ಒಕ್ಕಲಿಗರ ಸಂಘವು ಜು.17ರ ವರೆಗೆ ಯಾವುದೇ ಸಭೆ ನಡೆಸದಂತೆ ಹೈಕೋರ್ಟ್‌ ಸೂಚನೆ

ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ, “ದೇಶದ ವ್ಯವಸ್ಥೆ ಕುಲಗೆಟ್ಟು ಹೋಗಿದ್ದು, ಎಲ್ಲೆಡೆ ಕುದುರೆ ವ್ಯಾಪಾರ ಮೆರೆದಾಡುತ್ತಿದೆ. ಇದನ್ನೆಲ್ಲ ಹೇಳಲು ನನಗೆ ನಾಚಿಕೆಯಾಗುತ್ತಿದೆ” ಎಂದು ಹೈಕೋರ್ಟು ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಸಿ.ಎನ್.ಬಾಲಕೃಷ್ಣ ಮತ್ತು ಕೋನಪ್ಪ ರೆಡ್ಡಿ ನೇತೃತ್ವದ ಕಾರ್ಯಕಾರಿ ಸಮಿತಿ ವಿರುದ್ಧ ಕೆಂಚಪ್ಪಗೌಡರ ಗುಂಪು 2023ರ ಮೇ 9ರಂದು ಅವಿಶ್ವಾಸ ನಿರ್ಣಯ ಮಂಡಿಸಿ, ನಂತರ ಚುನಾವಣೆ ನಡೆಸಿ ಅಧಿಕಾರ ಪಡೆದದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅಸಲು ದಾವೆಯಲ್ಲಿನ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ, ಒಕ್ಕಲಿಗರ ಸಂಘವು ಜುಲೈ 17ರ ವರೆಗೆ ಯಾವುದೇ ಸಭೆ ನಡೆಸುವುದು ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರಶ್ನಿಸಿ ಸಂಘದ ಸದಸ್ಯರಾದ ಹಾಸನ ಜಿಲ್ಲೆಯ ಸಂಕ್ಲಾಪುರದ ಎಸ್‌.ಎಸ್‌.ರಘುಗೌಡ, ಸೇರಿದಂತೆ ನಾಲ್ವರು ಸದಸ್ಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೆಂಚಪ್ಪಗೌಡರ ಪರ ಹಾಜರಾಗಿದ್ದ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಅವರು ವಾದಮಂಡಿಸಿ, “ಉಭಯ ಬಣಗಳು 17ರವರೆಗೆ ಯಾವುದೇ ಸಭೆ ಹಾಗೂ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶಿಸಬೇಕು. ಇಲ್ಲದಿದಲ್ಲಿ ಇದು ರೆಸಾರ್ಟ್ ರಾಜಕೀಯಕ್ಕೆ ದಾರಿ ಮಾಡಿಕೊಡುತ್ತದೆ’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಮನವಿ ಪರಿಗಣಿಸಿದ ನ್ಯಾಯಮೂರ್ತಿ ಎಚ್‌ ಪಿ ಸಂದೇಶ ಅವರು, ಹೈಕೋರ್ಟ್‌ ಮೆಟ್ಟಿಲೇರಿರುವ ಸದಸ್ಯರನ್ನು ಹೊರತುಪಡಿಸಿ ಉಳಿದ ಸದಸ್ಯರಿಗೆ ಪೂರ್ವ ನೋಟಿಸ್ ನೀಡಿ ಅವಿಶ್ವಾಸ ನಿರ್ಣಯ ಮಂಡಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಜು. 17ಕ್ಕೆ ಮುಂದೂಡಿದರು.

ಸಂಘದ ನಡೆ ಬಗ್ಗೆ ಅಸಮಾಧಾನ

ಒಕ್ಕಲಿಗರ ಸಂಘದ ಕುರಿತು ಪ್ರತಿಕ್ರಿಯಿಸಿರುವ ಪೀಠ, “ಸಂಘದಲ್ಲಿ ಮೆಡಿಕಲ್ ಸೀಟುಗಳನ್ನು ಅನಿವಾಸಿ ಭಾರತೀಯರಿಗೆ ಕೋಟಿಗಟ್ಟಲೇ ರೂಪಾಯಿಗಳಿಗೆ ಮಾರಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಈ ಕುಸ್ತಿ ನಡೆಯುತ್ತಿದೆ. 1904ರಲ್ಲಿ ಸ್ಥಾಪನೆಗೊಂಡ ಈ ಸಂಘದ ಮೂಲ ಉದ್ದೇಶಗಳೇ ಇಂದು ಮರೆಯಾಗಿವೆ. ಸಂಘದ ಸದಸ್ಯರ ಆತ್ಮಾವಲೋಕನಕ್ಕೆ ಇದು ಸಕಾಲವಾಗಿದೆ” ಎಂದು ನ್ಯಾಯಮೂರ್ತಿಗಳು ಉಚ್ಛರಿಸಿದರು.

“ನನ್ನ ಮಗಳಿಗೆ ಕಿಮ್ಸ್‌ನಲ್ಲಿ (ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ವೈದ್ಯಕೀಯ ಪದವಿಗೆ ಸೇರಿಸುವಂತೆ ನನ್ನನ್ನು ಬಲ್ಲವರೊಬ್ಬರು ಸಲಹೆ ನೀಡಿದ್ದರು. ಆದರೆ, ಸಂಘದೊಳಗಿನ ಕಿತ್ತಾಟ ನೋಡಿ ಇವರ ಸಹವಾಸವೇ ಬೇಡ ಎಂದು ಕಿಮ್ಸ್‌ನಿಂದ ದೂರ ಉಳಿದೆ” ಎಂದು ತಮ್ಮ ಅನುಭವ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....