ವಿಧಾನಸೌಧ: ಸಚಿವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ

Date:

ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ ಚೀಲದೊಂದಿಗೆ ಬಂದಿದ್ದರು. ಕೆಲಸ ಮುಗಿಸಿದ ತೆರಳುವಾಗ ಕೈ ಚೀಲವನ್ನು ಮರೆತು ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮಾರನೇ ದಿನ ಬಂದು ನೋಡಿದಾಗ ಕೈ ಚೀಲ ನಾಪತ್ತೆಯಾಗಿತ್ತು. 300 ಗ್ರಾಂ ಚಿನ್ನಾಭರಣ, 1.5 ಲಕ್ಷ ರೂ.ನಗದು ಇದ್ದ ಕೈಚೀಲ ಕಳ್ಳತನವಾದ ಬೆನ್ನಲ್ಲೇ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ನಡೆನುಡಿ ತಟಸ್ಥವಾಗಿರಬೇಕೆಂಬ ಸಂವಿಧಾನದ ಆಶಯದ ಸಾರಾಸಗಟು ಉಲ್ಲಂಘನೆಯಿದು!

ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಿಧಾನಸೌಧದ ಆಡಳಿತಾತ್ಮಕ ಮತ್ತು ಭದ್ರತಾ ವಿಷಯಗಳಿಗೆ ಸಂಬಂಧಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಡಿ ಗ್ರೂಪ್ ನೌಕರನ ಪಾತ್ರ ಗೊತ್ತಾಗಿದೆ.

ನೌಕರ ಕೈ ಚೀಲ ಹಿಡಿದುಕೊಂಡು ಹೋಗುವುದು ಸಿಸಿಟಿವಿಯಲ್ಲಿ ಪತ್ತೆಯಾದ ಬೆನ್ನಲ್ಲೇ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...