ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರು: ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ “ವೋಟ್ ಚೋರಿ” ವಿರುದ್ಧ ನಡೆಯುತ್ತಿರುವ “ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ಮತದಾರರ ಪಟ್ಟಿಯನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಕ್ರಮ ಆಗಿಲ್ಲ. ನಕಲಿ ಮತಗಳ ರದ್ದುಗೊಳಿಸುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮೀನ ಮೇಷ ಎಣಿಸುತ್ತಿರುವುದು ಏಕೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ತಶ್ನಿಸಿದರು.

- Advertisement -

ದೇಶದಲ್ಲಿ ಈಗಾಗಲೇ ಮತಗಳ್ಳತನ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿರವರು ಸವಿಸ್ತಾರವಾಗಿ ದೇಶದ ಜನತೆಗೆ ದಾಖಲೆಯ ಸಮೇತವಾಗಿ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆಂತಕಪಡುವ ಸ್ಥಿತಿಯಲ್ಲಿದೆ. ಸಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ವೋಟ್ ಬ್ಯಾಂಕ್ ಮಾಡಿಕೊಂಡಿರುವುದು ಅತ್ಯಂತ ಖಂಡನೀಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರ್ನಾಟಕ ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಜನರು ಪ್ರಶ್ನೆ ಮಾಡಬೇಕಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣಾ ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೆ ಇರುವ ಮತದಾರರನ್ನು ಸೃಷ್ಟಿಸಿ, ಸಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ “ವೋಟ್ ಚೋರಿ” ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ. ನಮ್ಮ ಚಿಕ್ಕಪೇಟೆಯ ವಾರ್ಡ್ ನಲ್ಲಿಯೇ ಸಾವಿರಾರು ನಕಲಿ ಮತದಾರರನ್ನು ನಮ್ಮ ಕಾರ್ಯಕರ್ತರು ಗುರುತಿಸಿದ್ದಾರೆ.

ಅದ್ದರಿಂದ ಇಂದು ನಾವು ನಡೆಸುತ್ತಿರುವ ಮತಗಳ್ಳತನ “ವೋಟ್ ಚೋರಿ” ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಯಶ್ವಸಿಯಾಗಿ ನಡೆಸಿ ಚುನಾವಣಾ ಆಯೋಗಕ್ಕೆ ಕಳುಹಿಸಿ ಕಣ್ಣಿ‌ಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಿದ್ರೆ ಮಾಡುತ್ತಿರುವ ಅಧಿಕಾರಿಗಳನ್ನು ಎಚ್ಚರಿಸಬೇಕಾಗಿದೆ. ಇಡೀ ದೇಶಾದ್ಯಂತ ಈ ಸಹಿ ಸಂಗ್ರಹ ನಡೆಯುತ್ತಿದ್ದು ನಮ್ಮ ಗಾಂಧಿನಗರ ಕ್ಷೇತ್ರದಿಂದಲ್ಲೂ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಮಾಡುವ ಗುರಿಯನ್ನು ಹೊ‌ಂದಿದ್ದು, ಎಲ್ಲ ಮತಬಾಂಧವರು ಇದರಲ್ಲಿ ಪಾಲ್ಗೊಂಡು ತಮ್ಮ ತಮ್ಮ ಸಹಿಯನ್ನು ಹಾಕುವ ಮುಖೇನ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ದೇಶವನ್ನು ಮತಗಳ್ಳತನದಿಂದ ರಕ್ಷಿಸೋಣ…

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್ತ, ಸೇರಿದಂತೆ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...