ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

Date:

ಇರಾನ್‌-ಇಸ್ರೇಲ್‌ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಈ ಮಾಹಿತಿ ನೀಡಿದರು.

- Advertisement -

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರವು ಯೂರಿಯಾ ಮತ್ತು ಡಿಎಪಿ ರಸಗೊಬ್ಬರ ಸರಬರಾಜು ಮಾಡಿಲ್ಲ. ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಬಳಸುವಂತೆ ಕೇಂದ್ರ ಸೂಚನೆ ನೀಡಿದೆ. ಹೀಗಾಗಿ ರಸಗೊಬ್ಬರ ಕೊರತೆಯಾಗಲಿದೆ. ಏಪ್ರಿಲ್ ತಿಂಗಳಿನಿಂದ ಈವರೆಗೆ 8.57 ಲಕ್ಷ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 4.31 ಲಕ್ಷ  ಟನ್ ಸರಬರಾಜು ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರೈತರ ಅನುಕೂಲಕ್ಕಾಗಿ ಕೃತಕ ಬುದ್ಧಿಮತ್ತೆ(ಎ.ಐ) ಬಳಸಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ಸಹಾಯವಾಣಿ ನಂಬರ್‌ಗೆ ಕರೆ ಮಾಡಿದರೆ ಮಾರುಕಟ್ಟೆ ಪರಿಸ್ಥಿತಿ, ಕೃಷಿ ಉತ್ಪನ್ನಗಳ ದರ ಸೇರಿದಂತೆ ಎಲ್ಲ ವಿವರಗಳ ಎಸ್‌ಎಂಎಸ್‌ ಸಂದೇಶ ಮತ್ತು ಧ್ವನಿ ಸಂದೇಶ ಒದಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ಮೊದಲ ವಾರ ಇದಕ್ಕೆ ಚಾಲನೆ ನೀಡಲಿದ್ದಾರೆ” ಎಂದರು.

ಕೃಷಿ ಇಲಾಖೆಯಲ್ಲಿ ಮೂರು ವರ್ಷದಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳು, ಹೊಸ ಯೋಜನೆಗಳ ಬಗ್ಗೆ ಅಂಕಿ ಅಂಶ ಸಹಿತ ಮಾಹಿತಿ ನೀಡಿದ ಅವರು, “ಲಕ್ಷಾಂತರ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ‘ಡಿಜಿಟಲ್ ಕೃಷಿ’ ಮೂಲಕ ರೈತರ ಉತ್ಪಾದನಾ ವೆಚ್ಚ ತಗ್ಗಿಸಿ ಆದಾಯ ದುಪ್ಪಟ್ಟುಗೊಳಿಸಲು ಶ್ರಮಿಸಲಾಗುವುದು. ರೈತರ ಆತ್ಮಹತ್ಯೆ ತಡೆಗೂ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದರು. 

“ವೈಜ್ಞಾನಿಕ ಮತ್ತು ಸಾವಯವ ಕೃಷಿ ಮಾಡುತ್ತಿರುವ ಯಾವುದೇ ರೈತರೂ ಆರ್ಥಿಕ ತೊಂದರೆಗೆ ಸಿಲುಕಿಲ್ಲ. ಇಂತಹ ಪ್ರಗತಿಪರ ರೈತರು ಪ್ರತಿ ಹಳ್ಳಿಯಲ್ಲೂ ಹೆಚ್ಚಾಗಬೇಕಿದೆ. ಕೃಷಿಯಲ್ಲಿನ ಇಂತಹ ಪದ್ಧತಿಗಳನ್ನು ಪ್ರತಿ ರೈತ ಕಲಿತು ಅಳವಡಿಸಿಕೊಳ್ಳುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

“ನೀರಿನಲ್ಲಿ ಶೇ.100ರಷ್ಟು ಕರಗುವ ಗೊಬ್ಬರ, ಲಘು ಪೋಷಕಾಂಶಗಳು, ನ್ಯಾನೊ ಯೂರಿಯಾ, ನ್ಯಾನೊ ಡಿಪಿಎ ಹಾಗೂ ಸಾವಯವ ಗೊಬ್ಬರ ಬಳಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಣ್ಣು ಪರೀಕ್ಷೆ ಆಧಾರದ ಮೇರೆಗೆ ಅಗತ್ಯವಿರುವ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ” ಎಂದು ಚಲುವರಾಯಸ್ವಾಮಿ ವಿವರಿಸಿದರು.

“ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಪರ್ಯಾಯ ಗೊಬ್ಬರ ಬಳಸುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ” ಎಂದರು.

“ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿ, ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ, ಅವಶ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ, ಕೃಷಿಯೇತರ ಚಟುವಟಿಕೆಗಳಿಗೆ ಯೂರಿಯಾ ರಸಗೊಬ್ಬರ ಮಾರಾಟ ಮಾಡದಂತೆ ಮಾರಾಟಗಾರರಿಗೆ ಮನವರಿಕೆ ಮಾಡಲಾಗಿದೆ. ರೈತರಲ್ಲದವರು ಯೂರಿಯಾ ರಸಗೊಬ್ಬರ ಖರೀದಿ ನಿಯಂತ್ರಿಸಲು ‘ಯೂರಿಯಾ ಡಿಸ್ಟ್ರಿಬೂಷನ್ ಆ್ಯಪ್’ ಅಭಿವೃದ್ಧಿಪಡಿಸಿ ವಿತರಣೆಗೆ ಕ್ರಮ ವಹಿಸಲಾಗಿದೆ. ಕೊರತೆ ನೀಗಿಸಲು ಪ್ರಸ್ತುತ ವಿವಿಧ ಗ್ರೇಡ್‌ನ 56,199 ಮೆಟ್ರಿಕ್‌ ಟನ್ ರಸಗೊಬ್ಬರ ಕಾಪು ದಾಸ್ತಾನು ಇದೆ’ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಮುಂಗಾರು ಮುನ್ನೆಚ್ಚರಿಕೆ: ಜಿಲ್ಲೆಯಾದ್ಯಂತ ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕಟ್ಟುನಿಟ್ಟಿನ ಆದೇಶ

ಕೃಷಿ ಇಲಾಖೆ ನಿರ್ದೇಶಕ ಜಿ ಟಿ ಪುತ್ರ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ ಎನ್‌ ಶಿವಪ್ರಕಾಶ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್ ವಿ ಸುರೇಶ್, ಪ್ರೆಸ್‌ಕ್ಲಬ್ ಅಧ್ಯಕ್ಷ ಆರ್ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...