ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

  • ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆ
  • ಕರಾವಳಿಯಲ್ಲಿ ಮುಂದುವರಿಯಲಿರುವ ಒಣಹವೆ

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯಪ್ರದೇಶದಿಂದ ತಮಿಳುನಾಡಿನತ್ತ ಗಾಳಿಯ ದಿಕ್ಕು ಬದಲಾವಣೆಯಾದ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ನಗರದಲ್ಲಿ ಬುಧವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯೂ ಆಗಿದೆ.

ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆ ಇರಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

ಬೆಂಗಳೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತಿ​ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್​ಪೋರ್ಟ್​ನಲ್ಲಿ 12.2 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ...

ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...