ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು: ಸರ್ಕಾರಕ್ಕೆ ಮಾ.2ರವರೆಗೆ ಗಡುವು

Date:

ಕರ್ನಾಟಕದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ)ದ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಿದ್ದರು. ಆದರೆ, ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಗಡುವು ನೀಡಿದ್ದಾರೆ.

- Advertisement -

ಕರ್ನಾಟಕ ಸಾರಿಗೆ ನಿಗಮಗಳ ನೌಕರರು 2020 ಜನವರಿ 1ರಿಂದ 2023 ಫೆಬ್ರವರಿ 28ರವರೆಗಿನ 38 ತಿಂಗಳ ವೇತನ ಹಿಂಬಾಕಿ ನೀಡುವಂತಹ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಇದು ಬಡ್ತಿ, DA, HRA ಮತ್ತು ಇತರ ಪ್ರಯೋಜನಗಳೊಂದಿಗೆ ಸುಮಾರು ₹1,785 ಕೋಟಿ ಆಗುತ್ತದೆ. ಸರ್ಕಾರ ಇತ್ತೀಚೆಗೆ 26 ತಿಂಗಳ ಹಿಂಬಾಕಿ(ಸುಮಾರು ₹1,239 ಕೋಟಿ ರೂ. ವೆಚ್ಚ) ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಆದರೆ ನೌಕರರು ಪೂರ್ಣ 38 ತಿಂಗಳ ಹಿಂಬಾಕಿಯನ್ನು ಒಂದೇ ಹಂತದಲ್ಲಿ ನೀಡಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“2024 ಜನವರಿ 1ರಿಂದ ವೇತನ ಪರಿಷ್ಕರಣೆ(ಹೊಸ ವೇತನ ಶ್ರೇಣಿ, 4 ವರ್ಷದ ವೇತನ ಒಪ್ಪಂದ) ಮಾಡಬೇಕು. ರಾಜ್ಯ ಸರ್ಕಾರಿ ನೌಕರರಂತೆಯೇ ಸಾರಿಗೆ ನೌಕರರಿಗೂ ಸಮಾನ ವೇತನ ನೀಡಬೇಕು. ‘ನೋ ವರ್ಕ್ ನೋ ಪೇ’ ನಿಯಮ ಹಿಂಪಡೆಯಬೇಕು. ESMA (Essential Services Maintenance Act) ಅಡಿ ಕ್ರಮ ತೆಗೆದುಕೊಳ್ಳಬಾರದು. ವಜಾ/ಸಸ್ಪೆಂಡ್ ಆದ ನೌಕರರನ್ನು ಮರುನೇಮಕಾತಿ ಮಾಡಿಕೊಳ್ಳಬೇಕು. ವಿಶ್ರಾಂತಿ ವೇತನ, ಪಿಂಚಣಿ ಪ್ರಯೋಜನಗಳ ಕುರಿತು ಸುಧಾರಣೆ ತರಬೇಕು. ಡಿಪೋಗಳಲ್ಲಿ ಸಿಬ್ಬಂದಿಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು” ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

“ಈ ಬೇಡಿಕೆಗಳು ಕಳೆದ 4-5 ವರ್ಷಗಳಿಂದಲೂ ಬಾಕಿ ಉಳಿದಿದ್ದು, ಹಲವು ಬಾರಿ ಸಭೆಗಳು, ಪ್ರತಿಭಟನೆಗಳು ನಡೆದಿವೆ. 2023ರಲ್ಲಿ ಇದೇ ಬಗೆಯ ಹೋರಾಟದಲ್ಲಿ ಶೇ.15% ವೇತನ ಹೆಚ್ಚಳ ಒಪ್ಪಂದವಾಗಿತ್ತು. ಆದರೆ ಅದು ಪೂರ್ಣ ಜಾರಿಯಾಗಿಲ್ಲ”ವೆಂದು ನೌಕರರು ಆರೋಪಿಸಿದರು.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಹಿಂದಿನ ಸಭೆಗಳಲ್ಲಿ 26 ತಿಂಗಳ ಹಿಂಬಾಕಿ + 2025ರ ಏಪ್ರಿಲ್‌ನಿಂದ ವೇತನ ಪರಿಷ್ಕರಣೆ ಘೋಷಣೆಯಾದರೂ ನೌಕರರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ಸಂಜೆ 4 ಗಂಟೆಯ ನಂತರ ಜಂಟಿ ಸಮಿತಿ ಸಭೆ ನಡೆಸಿ ಪ್ರತಿಭಟನಾಕಾರರು ನಿರ್ಧಾರ ಕೈಗೊಂಡಿದ್ದು, ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಫೆಬ್ರವರಿ 20ರಿಂದ ಆರಂಭವಾಗುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆ ನೀಡಲಾಗಿದೆ. ಆದರೆ ಸರ್ಕಾರ ಮಾರ್ಚ್ 2ರೊಳಗೆ ಪೂರ್ಣ 38 ತಿಂಗಳ ಹಿಂಬಾಕಿ + ಜನವರಿ 2024ರಿಂದ ವೇತನ ಪರಿಷ್ಕರಣೆ ಆದೇಶ ಹೊರಡಿಸದಿದ್ದರೆ ಮಾರ್ಚ್ 2ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಿದ್ದಾರೆ.

ಸರ್ಕಾರದ ಸ್ಪಂದನೆ ಮತ್ತು ವೆಚ್ಚ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ 26 ತಿಂಗಳ ಹಿಂಬಾಕಿ ₹1,239.5 ಕೋಟಿ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.
2025ರ ಏಪ್ರಿಲ್‌ 1ರಿಂದ ವೇತನ ಪರಿಷ್ಕರಣೆಗೆ ಚರ್ಚೆ ನಡೆಸಲಾಗುತ್ತಿದೆ. 2023ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ವೇತನ ಪರಿಷ್ಕರಣೆ ಮಾಡುವುದಾಗಿ ಹೇಳಲಾಗಿತ್ತು. ಅಂತಯೇ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಎಂದುಕೊಂಡರೂ 2027ಕ್ಕೆ ವೇತನ ಪರಿಷ್ಕರಣೆ ಮಾಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, 2025ರ ಏಪ್ರಿಲ್‌ನಿಂದ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಲಾಗಿದೆ. ಈ ಹಿಂದೆಯೇ ₹224 ಕೋಟಿ ವಿಶ್ರಾಂತಿ ವೇತನ ಬಿಡುಗಡೆ ಮಾಡಲಾಗಿದೆ. ನಿಗಮಗಳು ಒಟ್ಟು ₹4,900 ಕೋಟಿ ನಷ್ಟದಲ್ಲಿರುವುದರಿಂದ ಸರ್ಕಾರದ ಆರ್ಥಿಕ ಒತ್ತಡವನ್ನು ಹೆಚ್ಚಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ತಿಳಿಸಿದ್ದಾರೆ.

“ವಿಪಕ್ಷ ನಾಯಕ ಆರ್‌ ಅಶೋಕ್‌ ಮಾತನಾಡಿ, “ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದೆ. ಸಾರಿಗೆ ನೌಕರರು 38 ತಿಂಗಳ ಹಿಂಬಾಕಿ ವೇತನಕ್ಕಾಗಿ ಮುಷ್ಕರಕ್ಕೆ ತಯಾರಾಗುತ್ತಿರುವುದು ರಾಜ್ಯದ ಆರ್ಥಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆರೋಪಿಸಿದ್ದಾರೆ.

“ಹಣ ಇಲ್ಲವಾದರೆ ಪಾಪರ್ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿಕೊಳ್ಳಲಿ ಎನ್ನುವ ಆರ್‌ ಅಶೋಕ್‌ ನಾನು ರಾಜ್ಯದ ಸಾರಿಗೆ ಸಚಿವನಾಗಿದ್ದಾಗ ನಷ್ಟವಿತ್ತೋ, ಲಾಭವಿತ್ತೋ ಎಂಬ ಮಾಹಿತಿ ಬಿಡುಗಡೆ ಮಾಡಲಿ” ಎಂದು ಸಮರ್ಥಿಸಿಕೊಂಡರು.

ಬಸ್ ಸೇವೆ ಪರಿಣಾಮ

ಸಾರಿಗೆ ನೌಕರರ ಮುಷ್ಕರಕ್ಕೆ ಗೈರುಹಾಜರಾದವರಿಗೆ ಸಂಬಳ ಕಡಿತದೊಂದಿಗೆ, ‘ಕೆಲಸವಿಲ್ಲ, ವೇತನವಿಲ್ಲ’ ಎಂಬ ನಿಯಮವನ್ನು ಜಾರಿಗೊಳಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಎಚ್ಚರಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಹೊರಗಿರುವ ಕಾರ್ಮಿಕರು ಮಾತ್ರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...