ಸಾರಿಗೆ ನೌಕರರ ಮುಷ್ಕರ | ಎಸ್ಮಾ ಜಾರಿಗೊಳಿದರೂ ಜಗ್ಗುವುದಿಲ್ಲ: ಮುಖಂಡ ವಿಜಯ ಭಾಸ್ಕರ್‌

Date:

ರಾಜ್ಯ ಸರ್ಕಾರ ನಮ್ಮ ಮೇಲೆ ಎಸ್ಮಾ(ESMA: Essential Services Management Act) ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾನಿರತರನ್ನು ಬಂಧಿಸುವ ಯೋಜನೆ ರೂಪಿಸುತ್ತಿದೆ. ತಮ್ಮ ಬೇಡಿಕೆಗಳ ಕುರಿತು ಇಂದು ಸಂಜೆಯೊಳಗೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ ನಾಳೆಯಿಂದ ರಾಜ್ಯ‌ದ್ಯಂತ ಬಸ್ ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಂದಾಗಿದೆ ಎಂದು ಸಮಿತಿ ಮುಖಂಡ ವಿಜಯ ಭಾಸ್ಕರ್‌ ಎಚ್ಚರಿಕೆ ನೀಡಿದ್ದಾರೆ.

- Advertisement -

ಸಾರಿಗೆ ನೌಕರರ ಮುಷ್ಕರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಏನೇ ಆದರೂ ಸರಿ, ಇಂದು ಸಂಜೆ 4 ಗಂಟೆಯೊಳಗೆ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ನಾಳೆಯಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಸರ್ಕಾರ ನಮಗೆ ಎಸ್ಮಾ ಅಥವಾ ಜೈಲಿನ ಭಯ ತೋರಿಸಬಾರದು. ನಾವು ಯಾವುದೇ ಬೆದರಿಕೆಗಳಿಗೆ ಜಗ್ಗುವುದಿಲ್ಲ. ನಮ್ಮ ಹಕ್ಕುಗಳಿಗಾಗಿ ಹೋರಾಡಲು ನಾವು ಸನ್ನದ್ದರಾಗಿದ್ದೇವೆ. ನಮ್ಮ ಬಂಧನವಾದರೂ ಹೋರಾಟ ನಿಲ್ಲದು. ನಮ್ಮ ಶ್ರಮದ ಫಲವನ್ನು ಕೇಳಲು ನಾವು ಬೀದಿಗಿಳಿಯುವ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ” ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ 38 ತಿಂಗಳ ವೇತನದ ಹಿಂಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ನೀಡಬೇಕು. ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ನೀಡಲಾಗುವ ಕಿರುಕುಳವನ್ನು ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಇಂದು ಸಂಜೆಯೊಳಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರಬೇಕಿದೆ. ಇಲ್ಲವಾದಲ್ಲಿ ನಾಳೆಯಿಂದ ಇಡೀ ಸಾರಿಗೆ ಸಂಸ್ಥೆ ನೌಕರರು ಬಸ್‌ ಏರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ‌

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾರಿಗೆ ನೌಕರರ ಮುಷ್ಕರ: ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮುನ್ನಡೆಸುವ ಎಚ್ಚರಿಕೆ

ಒಂದು ವೇಳೆ ಮುಷ್ಕರ ಆರಂಭವಾದರೆ, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...