ಬೆಂಗಳೂರು | ಹೈಕೋರ್ಟ್‌ ಜಡ್ಜ್ ಮುಂದೆಯೇ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Date:

ಜಡ್ಜ್ ಮುಂದೆಯೇ ಅನಾಮಧೇಯ ವ್ಯಕ್ತಿಯೊಬ್ಬ ಬ್ಲೇಡ್‌ನಿಂದ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕರ್ನಾಟಕ ಹೈಕೋರ್ಟ್‌ನಲ್ಲಿ ಬುಧವಾರ ನಡೆದಿದೆ.

- Advertisement -

ಅನಾಮಿಕ ವ್ಯಕ್ತಿಯೋರ್ವ ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿದ್ದು, ಈ ವೇಳೆ ಕೈ ಕತ್ತರಿಸಿಕೊಂಡು ನ್ಯಾಯ ನೀಡಿ ಎಂದು ನ್ಯಾಯಾಧೀಶರ ಮುಂದೆ ಕೋರಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಖ್ಯ ನ್ಯಾಯಮೂರ್ತಿ ಅನ್‌ ವಿ ಅಂಜಾರಿಯಾ ಮತ್ತು ಡಾ. ನ್ಯಾಯಮೂರ್ತಿ ಎಚ್‌ ಬಿ ಪ್ರಭಾಕರ್‌ ಶಾಸ್ತ್ರಿ ಅವರ ಪೀಠದ ಮುಂದೆ ನಡೆದ ಘಟನೆ ನಡೆದಿದ್ದು, ಕೂಡಲೇ ರೇಜರ್‌ನಿಂದ ಕೈ ಕತ್ತರಿಸಿಕೊಂಡ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದೊಯ್ಯುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಬಳಿಕ ಮುಖ್ಯ ನ್ಯಾಯಮೂರ್ತಿ ಅನ್‌ ವಿ ಅಂಜಾರಿಯಾ ಅವರು, ರೇಜರ್‌ ಮುಟ್ಟಬೇಡಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿ, ಪಂಚನಾಮೆ ನಡೆಸುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಚನೆ ನೀಡಿದ್ದಾರೆ.

ಘಟನೆಯ ಬಳಿಕ ಪೊಲೀಸರನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಎಚ್‌ ಬಿ ಪ್ರಭಾಕರ್‌ ಶಾಸ್ತ್ರಿ, ಕೋರ್ಟ್‌ ಹಾಲ್‌ನ ಭದ್ರತೆ ಅಪಾರವಾಗಿದೆ. ಆದರೂ ಈ ವ್ಯಕ್ತಿ ಹೇಗೆ ರೇಜರ್ ಹಿಡಿದುಕೊಂಡು ಬಂದಿದ್ದು ಹೇಗೆ? ಹೈಕೋರ್ಟ್‌ ಪೊಲೀಸರು ಎಲ್ಲಿ ಹೋಗಿದ್ದಾರೆ? ಎಂದು ಕೇಳಿದರು.

ಘಟನೆಯ ಸಂದರ್ಭದಲ್ಲಿ ಕೋರ್ಟ್‌ ಅಧಿಕಾರಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಕಡತವನ್ನು ಹಿಡಿದುಕೊಂಡಿದ್ದನ್ನು ಗಮನಿಸಿದ ನ್ಯಾಯಾಧೀಶರು, “ಆತ ನೀಡಿದ ಕಡತವನ್ನು ನೀವೇಕೆ ಪಡೆದುಕೊಂಡಿರಿ. ಅದನ್ನು ಪಡೆದು ಬಳಿಕ ಕೆಳಗೆ ಇಟ್ಟಿದ್ದೀರಿ. ಹೀಗಾಗಿ, ನಿಮ್ಮ ಬೆರಳಚ್ಚನ್ನೂ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ಕೋರ್ಟ್‌ ಅಧಿಕಾರಿಯು ಯಾವುದೇ ದಾಖಲೆ ಸ್ವೀಕರಿಸುವಂತಿಲ್ಲ. ವಕೀಲರು ಕಡತ ನೀಡಿದ್ದರೆ ನೋಡಬಹುದಿತ್ತು. ಆದರೆ, ಅದನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ” ಎಂದು ತಿಳಿಸಿದರು.

ಈ ವೇಳೆ ಸರ್ಕಾರದ ವಕೀಲ ಎಸ್‌ ಎಸ್‌ ಮಹೇಂದ್ರ, ಪ್ರಕರಣವನ್ನು ಹೈಕೋರ್ಟ್‌ ವ್ಯಾಪ್ತಿ ಹೊಂದಿದ ಪೊಲೀಸರಿಗೆ ತಿಳಿಸುವುದು ಸೂಕ್ತ ಎಂದು ಸಲಹೆ ನೀಡಿದರು. ಆ ಬಳಿಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ಘಟನೆಯ ಮಾಹಿತಿಯನ್ನು ಮುಖ್ಯ ನ್ಯಾಯಮೂರ್ತಿ ನೀಡಿದ ನಂತರ, ಕಲಾಪ ಮುಕ್ತಾಯಗೊಳಿಸಲಾಗಿದೆ.

ಸದ್ಯ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿವರಗಳು ಲಭ್ಯವಾಗಿಲ್ಲ. ಯಾವ ಪ್ರಕರಣದ ಸಂಬಂಧ ಹೈಕೋರ್ಟ್‌ಗೆ ಬಂದಿದ್ದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...