ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಜೆ.ಬಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಗ್ಗದಾಸಪುರ ಮುಖ್ಯ ರಸ್ತೆಯ ವರ್ಸೋವಾ ಲೇಔಟ್ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸೇತುವೆ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಈ ಹಿನ್ನೆಲೆ, ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಸಲುವಾಗಿ ಕೆಲವು ಮಾರ್ಗಸೂಚಿ ನೀಡಿದ್ದಾರೆ.

“ಕಾಮಗಾರಿಯ ಸಮಯದಲ್ಲಿ ಪೂರ್ವಂಕರ ಅಪಾರ್ಟ್ಮೆಂಟ್‌ನಿಂದ ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ಹಾಗೂ ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ” ಎಂದು ಬೆಂಗಳೂರು ಸಂಚಾರ ಪೊಲೀಸ್ ಮಾಹಿತಿ ನೀಡಿದೆ.

“ಕಾಮಗಾರಿಯ ಸಮಯದಲ್ಲಿ ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ವಾಹನಗಳು ಪೂರ್ವಂಕರ ಅಪಾರ್ಟ್ಮೆಂಟ್ ಎದುರಿನ ಬೈರಸಂದ್ರ 5ನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು, ಬೈರಸಂದ್ರ ಮುಖ್ಯ ರಸ್ತೆಯ ಮೂಲಕ ಜಿ.ಎಂ.ಪಾಳ್ಯ ಜಂಕ್ಷನ್ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳು ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಕಗ್ಗದಾಸಪುರ ಮುಖ್ಯ ರಸ್ತೆ ವಿಜ್ಞಾನ ನಗರ ಜಂಕ್ಷನ್ಬಲತಿರುವು ಜಿ.ಎಂ ಪಾಳ್ಯ ಮುಖ್ಯ ರಸ್ತೆಬೆಮೆಲ್ ಜಂಕ್ಷನ್ ಬಲ ತಿರುವುಗೀತಾಂಜಲಿ ಲೇಔಟ್ ಜಂಕ್ಷನ್ ಬಲ ತಿರುವು ಪಡೆದು ಡಿ.ಆರ್.ಡಿ. ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಬಹುದು ಅಥವಾ ಜಿ.ಎಂ.ಪಾಳ್ಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಬೈರಸಂದ್ರ ಮುಖ್ಯ ರಸ್ತೆ ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಬಿಬಿಎಂಪಿ ಕೈಗೆತ್ತಿಕೊಂಡಿರುವ ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಪೂರ್ವಂಕರ ಅಪಾರ್ಟ್ಮೆಂಟ್ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ನಿಲ್ದಾಣದವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು,...

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...