ಬೆಂಗಳೂರು | ‘ನನ್ನ ನಂತರ ಆಕೆ ಒಂಟಿಯಾಗುತ್ತಾಳೆ?’ ಎಂದು ಪತ್ನಿಯನ್ನೇ ಕೊಂದ ಇಸ್ರೋ ಮಾಜಿ ಉದ್ಯೋಗಿ

Date:

ತನ್ನ ಸಾವಿನ ನಂತರ ಪತ್ನಿಯ ಭವಿಷ್ಯವೇನಾಗಬಹುದು ಎಂಬ ಆತಂಕದಿಂದ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಮಾಜಿ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

​ಆರೋಪಿಯನ್ನು ನಾಗೇಶ್ ಈಶ್ವರ ರಾವ್ ಎಂದು ಗುರುತಿಸಲಾಗಿದೆ. ವೈಟ್‌ಫೀಲ್ಡ್‌ನ ಬೊಮ್ಮನಹಳ್ಳಿ ಪ್ರದೇಶದಲ್ಲಿರುವ ‘ವರ್ಚುವೊಸೊ’ ಎಂಬ ಅಪಾರ್ಟ್‌ಮೆಂಟ್‌ನಲ್ಲಿ ನಾಗೇಶ್ ಅವರ ಪತ್ನಿ ಸಂಧ್ಯಾ ಶ್ರೀ ಅವರ ಮೃತದೇಹ ಪತ್ತೆಯಾದ ಬೆನ್ನಲ್ಲೇ, ಬುಧವಾರ ಬೆಳಿಗ್ಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಆರೋಪಿ ನಾಗೇಶ್ ರಾವ್ ಖಿನ್ನತೆಯಿಂದ ಬಳಲುತ್ತಿದ್ದು, ತೀವ್ರ ಹತಾಶೆಗೆ ಒಳಗಾಗಿದ್ದರು. ಇದಕ್ಕಾಗಿ ಆತ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರವೆಂಬ ಸ್ನಾನದ ಕೋಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಬೆತ್ತಲೆಯೇ…

​ಪ್ರಾಥಮಿಕ ತನಿಖೆಯ ವೇಳೆ ಪೊಲೀಸರ ಮುಂದೆ ಹೇಳಿಕೆ ನೀಡಿರುವ ಆರೋಪಿ, ‘ನನ್ನ ಸಾವಿನ ನಂತರ ಪತ್ನಿಯ ಭವಿಷ್ಯವೇನು ಎಂಬ ಆತಂಕ ನನ್ನನ್ನು ಕಾಡುತ್ತಿತ್ತು. ಅದೇ ಕಾರಣಕ್ಕಾಗಿ ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದೆ’ ಎಂದು ತಿಳಿಸಿದ್ದಾರೆ.

​”ಆರೋಪಿಯು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ. ಪತ್ನಿಯ ಹತ್ಯೆಯ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶವನ್ನು ಆತ ಹೊಂದಿದ್ದರು. ಹೀಗಾಗಿಯೇ ಆತ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಘಟನೆಗೆ ಬೇರೆ ಯಾವುದೇ ಪ್ರಮುಖ ಕಾರಣಗಳಿರುವಂತೆ ಕಂಡುಬರುತ್ತಿಲ್ಲ” ಎಂದು ವೈಟ್‌ಫೀಲ್ಡ್ ವಿಭಾಗದ ಪೊಲೀಸ್ ಉಪ ಆಯುಕ್ತ (ಡಿಸಿಪಿ) ಸೈದುಲು ಅದಾವತ್ ತಿಳಿಸಿದ್ದಾರೆ.

​ದಂಪತಿಯ ಏಕೈಕ ಪುತ್ರಿ ಅಮೆರಿಕದಲ್ಲಿ ನೆಲೆಸಿದ್ದು, ಘಟನೆಯ ಬಗ್ಗೆ ಆಕೆಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...