ಜಲಮಂಡಳಿಯ ‘ಬ್ಲೂ ಫೋರ್ಸ್’ ಭರ್ಜರಿ ಕಾರ್ಯಾಚರಣೆ: ಅಕ್ರಮ ಸಂಪರ್ಕಗಳ ವಿರುದ್ಧ ಸಮರ

Date:

  • ಒಂದೇ ದಿನದಲ್ಲಿ (ಡಿ.20) 70 ಅಕ್ರಮ ಸಂಪರ್ಕ ಕಡಿತ
  • ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಅಕ್ರಮ ಪತ್ತೆ

ನೀರು ಮತ್ತು ಒಳಚರಂಡಿಗಳ ಅಕ್ರಮ ಸಂಪರ್ಕಗಳನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿ ರಚಿಸಿರುವ ವಿಶೇಷ ಕಾರ್ಯಪಡೆ ‘ಬ್ಲೂ ಫೋರ್ಸ್'(Blue Force), ಕಳೆದ ಒಂದು ತಿಂಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದಾದ್ಯಂತ ಬರೋಬ್ಬರಿ 4,000ಕ್ಕೂ ಹೆಚ್ಚು ಕಟ್ಟಡಗಳು ಮತ್ತು ಸ್ಥಳಗಳನ್ನು ತಪಾಸಣೆ ನಡೆಸಿರುವ ಪಡೆ, ನೂರಾರು ಅಕ್ರಮ ಸಂಪರ್ಕಗಳನ್ನು ಪತ್ತೆಹಚ್ಚಿ ಬಿಸಿ ಮುಟ್ಟಿಸಿದೆ.

- Advertisement -

ಒಂದೇ ದಿನ 70 ಸಂಪರ್ಕ ಕಡಿತ: ದತ್ತಾಂಶಗಳ ಪ್ರಕಾರ, ಡಿಸೆಂಬರ್ 20ರಂದು ಒಂದೇ ದಿನ ಬ್ಲೂ ಫೋರ್ಸ್ ತಂಡಗಳು ನಗರದ ನಾಲ್ಕು ವಲಯಗಳಲ್ಲಿ 237 ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿವೆ. ಈ ವೇಳೆ ಅಕ್ರಮವಾಗಿ ನೀರು ಬಳಸುತ್ತಿದ್ದ 70 ಸಂಪರ್ಕಗಳನ್ನು ಸ್ಥಳದಲ್ಲೇ ಕಡಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಲಯವಾರು ವಿವರ (ಡಿಸೆಂಬರ್ 20ರ ವರದಿ):

ದಕ್ಷಿಣ ವಲಯ: ಅತಿಹೆಚ್ಚು ಕಾರ್ಯಾಚರಣೆ ನಡೆದಿದ್ದು, 61 ಕಟ್ಟಡಗಳ ತಪಾಸಣೆ ನಡೆಸಿ 33 ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ.

ಪೂರ್ವ ವಲಯ: 18 ಸಂಪರ್ಕ ಕಡಿತ, ಪಶ್ಚಿಮ ವಲಯ: 15 ಸಂಪರ್ಕ ಕಡಿತ, ಹಾಗೂ ಉತ್ತರ ವಲಯದಲ್ಲಿ 4 ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಲಂ ನಿವಾಸಿಗಳ ಮೇಲೆ ಅಧಿಕಾರಿಗಳ ದರ್ಪ; 300 ಕುಟುಂಬಗಳು ಬೀದಿಪಾಲು

ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಪ್ರತಿಕ್ರಿಯಿಸಿದ್ದು, “ನೀರು ಕಳ್ಳತನ ಮತ್ತು ಅನಧಿಕೃತ ಸಂಪರ್ಕಗಳಿಂದ ಮಂಡಳಿಗೆ ಆಗುತ್ತಿರುವ ಆದಾಯ ಸೋರಿಕೆ ತಡೆಗಟ್ಟಲು ಬ್ಲೂ ಫೋರ್ಸ್ ಹಗಲಿರುಳು ಶ್ರಮಿಸುತ್ತಿದೆ. 4,000 ತಪಾಸಣೆಗಳು ಕೇವಲ ಆರಂಭವಷ್ಟೇ. ಅಕ್ರಮ ಸಂಪರ್ಕ ಹೊಂದಿರುವವರು ಕೂಡಲೇ ಸಕ್ರಮಗೊಳಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡ ಮತ್ತು ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...