ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆಯ ಮುಂದೆಯೇ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರಿಗೆ ಡಿಸಿಎಂ ಎಚ್ಚರಿಕೆ

Date:

“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್‌ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಎಚ್ಚರಿಕೆ ನೀಡಿದರು.

- Advertisement -

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಂಗಳವಾರ ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಬೆದರಿಕೆ ಹಾಕಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್‌.ಅಶೋಕ್‌, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬೆದರಿಕೆ ಹಾಕುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಯಾವ ಉದ್ದೇಶಕ್ಕೆ ಶಾಸಕರುಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಈ ಹಿಂದಿನಿಂದ ಏನು ಕೆಲಸ ಮಾಡಿಕೊಂಡು ಬರಲಾಗುತ್ತಿತ್ತೊ ಅದೇ ಕೆಲಸವನ್ನು ಈಗಲೂ ಮಾಡಿಕೊಂಡು ಬರಲಾಗುತ್ತಿದೆ. ಅವರ ಕ್ಷೇತ್ರಗಳಿಗೆ ಅನುದಾನ ಬೇಕು ಎಂದು ಹೀಗೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಕಸದ ಲಾರಿಯಿಂದ ಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಪಘಾತ ಆಗಬಾರದಿತ್ತು ಆಗಿದೆ. ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದು ಸರಿಯಲ್ಲ. ಎಸ್‌ ಟಿ ಸೋಮಶೇಖರ್‌, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್‌ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಅನುದಾನ ಅಲಭ್ಯತೆಗೆ ಬಿಜೆಪಿ ಸರ್ಕಾರವೇ ಕಾರಣ

ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರುಗಳು ಮೊದಲು ಕಾಮಗಾರಿ ನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿಲ್ಲವೇ? ಆದರೂ ಏಕೆ ಕೆಲಸಗಳನ್ನು ತೆಗೆದುಕೊಂಡರು. ಆರ್ಥಿಕ ಲಭ್ಯತೆ ಇಲ್ಲದೇ ಇದ್ದರೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋ ಆ ಕೆಲಸವನ್ನು ನಾನು ಮಾಡಿದ್ದೇನೆ. ಉದಾಹರಣೆಗೆ 10 ಸಾವಿರ ಕೋಟಿ ಅನುದಾನವಿದ್ದರೆ 30- 40 ಸಾವಿರ ಕೋಟಿ ಟೆಂಡರ್‌ ಕರೆದಿದ್ದಾರೆ. ಇದೆಲ್ಲದ್ದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್‌ ಬಿಲ್‌ ಎಂದರೆ ಏನು ಮಾಡುವುದು. ಅಂದು ಏಕೆ ಕೆಲಸಗಳನ್ನು ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನು ನೀಡುತ್ತೇನೆ. ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಏಕೆ ಪ್ರಾರಂಭ ಮಾಡಿದರು” ಎಂದು ಹೇಳಿದರು.

ನಿಮಗೂ ಕೆಲಸ ನಿಲ್ಲಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆಯೇ ಎಂದು ಕೇಳಿದಾಗ, “ಕೆಲಸ ನಿಲ್ಲಿಸಿಕೊಳ್ಳುವವರು ನಿಲ್ಲಿಸಿಕೊಳ್ಳಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್‌ ಪ್ರಕಾರ ಹಣ ನೀಡುತ್ತಿದೆ. ಎಷ್ಟು ಆಗುತ್ತದೆಯೋ ಅಷ್ಟು ಹಣವನ್ನು ನಾವು ಕೊಡುತ್ತೇವೆ. ಬಜೆಟ್‌ ಆದ ನಂತರ ಏನಾದರೂ ಮಾಡೋಣ. ನಮಗೂ ಮಾನವೀಯತೆ ಇದೆ. ಬೆದರಿಕೆ ಹಾಕುತ್ತೇವೆ ಅನ್ನುವವರೆಲ್ಲಾ ಮಾಡಿಕೊಳ್ಳಲಿ” ಎಂದರು.

ನಕಲಿ ಬೆರಳಚ್ಚಿನ ಮೂಲಕ ಅನ್ನಭಾಗ್ಯ ಅಕ್ಕಿ ಲೂಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...