ಹುಲಸೂರ | ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಿ : ಶಶಿಧರ ಕೋಸಂಬೆ

Date:

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರ ನೇತ್ರತ್ವದಲ್ಲಿ ಗುರುವಾರ ಹುಲಸೂರ ಪಟ್ಟಣ ಸೇರಿದಂತೆ ತಾಲೂಕಿನ ಮುಚಳಂಬ, ಗೋರ್ಟಾ(ಬಿ) ಗ್ರಾಮಗಳ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಬಾಲಕ-ಬಾಲಕಿಯರ ವಸತಿ ನಿಲಯ ಹಾಗೂ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.

- Advertisement -

ಹುಲಸೂರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಹೇರಿಗೆ ಕೋಣೆ ವೀಕ್ಷಿಸಿ, ಸ್ವಚ್ಚತೆ ಬಗ್ಗೆ ಗಮನ ಹರಿಸಿ, ಹೆರಿಗೆಗೆ ಬೇಕಾದ ಸಾಮಗ್ರಿಗಳ ಬಗ್ಗೆ, ಮಕ್ಕಳ ತೂಕ ಹಾಗೂ ಸುರಕ್ಷತೆಗಾಗಿ ಯಾವ ಕ್ರಮ ಕೈಗೊಳ್ಳತ್ತೀರಿ ಎಂದು ಪ್ರಶ್ನಿಸಿದರು. ಸ್ವಚ್ಛತೆ ಕಡೆ ಹೆಚ್ಚಿನ ಗಮನ ಹರಿಸಿ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಒದಗಿಸಿ ಯಾವುದೇ ದೂರುಗಳು ಬಾರದಂತೆ ಎಚ್ಚ ವಹಿಸಿ ಎಂದರು. ʼಆಸ್ಪತ್ರೆಗೆ ಈಗ ಕೆಲವು ಸಾಮಗ್ರಿಗಳು ಬಂದಿವೆ, ಅವುಗಳನ್ನು ಕೂಡಲೇ ಉಪಯೋಗಿಸುತ್ತೇವೆʼ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಶಶಿಕಾಂತ ಕನ್ನಾಡೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಸಮಾಜ ಕಲ್ಯಾಣ ಇಲಾಖೆಯ ಹುಲಸೂರ ಪಟ್ಟಣದ ಬಾಲಕ-ಬಾಲಕಿಯರ ವಸತಿ ನಿಲಯ ಹಾಗೂ ಮುಚಳಂಬ ಗ್ರಾಮದ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಾರ್ಡನ್‌ಗೆ ಹಲವು ಪ್ರಶ್ನೆಗಳು ಕೇಳಿದರು. ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೀಲಿಪಕುಮಾರ ಉತ್ತಮ ಅವರಿಗೆ ತಿಳಿಸಿದರು.

ʼಮುಚಳಂಬ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಹಾಜರಾತಿ, ಶಾಲಾ ಬಿಟ್ಟ ಮಕ್ಕಳ ಹಾಜರಾತಿ ಕುರಿತು ಮಾಹಿತಿ ಕೇಳಿದರು. ಆದರೆ, ಶಾಲಾ ವರ್ಗ ಶಿಕ್ಷಕರು ಮತ್ತು ಮುಖ್ಯಗುರು ನಿಖರ ಮಾಹಿತಿ ನೀಡದಿರುವುದಕ್ಕೆ ಶಾಲಾ ಶಿಕ್ಷಕರ, ಮುಖ್ಯಗುರು ಹಾಗೂ ಸಿಆರ್‌ಪಿಗಳ ಮೇಲೆ ದೂರು ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದರು. ಕೂಡಲೇ ಇಂತಹ ಶಿಕ್ಷಕರ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕುʼ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಒಂದೇ ಶಾಲೆಯಲ್ಲಿ ನಾಲ್ಕು ಬಾಲ್ಯವಿವಾಹ :

ಹುಲಸೂರ ಪಟ್ಟಣದ ಅನುದಾನಿತ ಶಾಲೆಯೊಂದಕ್ಕೆ ಭೇಟಿ ನೀಡಿದ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಶಾಲೆಯ 9 ಮತ್ತು 10ನೇ ತರಗತಿಯ ನಾಲ್ಕು ವಿದ್ಯಾರ್ಥಿನಿಯರು ಸತತವಾಗಿ ಗೈರಾಗಿದ್ದು, ಬಾಲ್ಯ ವಿವಾಹ ಆಗಿರುವುದರ ಬಗ್ಗೆ ಮಾಹಿತಿ ಬಂದಿರುವುದಾಗಿ ತಿಳಿಸಿದರು. ಅದನ್ನು ಗಂಭೀರವಾಗಿ ಪರಿಗಣಿಸದ ಅಲ್ಲಿನ ಶಿಕ್ಷಕರಿಗೆ ತರಾಟೆಗೆ ತೆಗೆದುಕೊಂಡರು. ಕೂಡಲೇ ತಪ್ಪಿಸ್ತರ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಿಸಿ ಆಯೋಗಕ್ಕೆ ವರದಿ ಸಲ್ಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದನೂರ ಅವರಿಗೆ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

ಹುಲಸೂರ ತಾ.ಪಂ. ಪ್ರಗತಿ ಪರಿಶೀಲನಾ ಸಭೆ :

ಮಕ್ಕಳ ಹಕ್ಕುಗಳಿಗೆ ಯಾವುದೇ ಧಕ್ಕೆ ಬಾರದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಮಕ್ಕಳ ಹಕ್ಕು ರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಒಂದೇ ಶಾಲೆಯಲ್ಲಿ 4 ಬಾಲ್ಯ ವಿವಾಹ ನಡೆದಿರುವುದು ಪ್ರಾಥಮಿಕ ಮಾಹಿತಿಯಿಂದ ಕಂಡು ಬಂದಿದ್ದು, ಕೂಡಲೇ ತಪ್ಪಿಸ್ತರ ವಿರುದ್ಧ ದೂರು ದಾಖಲಿಸಿ ವರದಿ ನೀಡುವಂತೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭಾಲ್ಕಿ | ಅತಿವೃಷ್ಟಿ : ಬೆಳೆ ಹಾನಿ ಪರಿಹಾರಕ್ಕೆ ಮನವಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವಾನಂದ ಮೇತ್ರೆ, ತಾಲೂಕು ಪಂಚಾಯತ್‌ ಇಒ ವೈಜಣ್ಣ ಫುಲೆ, ಸಿಡಿಪಿಒ ಗೌತಮ ಸಿಂಧೆ, ಸಿಪಿಐ ಅಲಿಸಾಬ್, ಪಿಎಸ್ಐ ಶಿವಪ್ಪಾ ಮೇಟಿ, ಕ್ಷೇತ್ರ‌ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದನೂರು ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...