ಬೀದರ್‌ | ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಬಾಲ್ಯ ವಿವಾಹ ಮಾಡುವ ಪಾಲಕರ ವಿರುದ್ಧ ಪೋಕ್ಷೊ ಪ್ರಕರಣ ದಾಖಲಿಸಬೇಕೆಂಬ ನಿಯಮವಿದ್ದು, ಅದನ್ನು ಮಾಡಿದಾಗ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ ನಡೆಯುವ ಕಲ್ಯಾಣ ಮಂಟಪ ಹಾಗೂ ಸಾಮೂಹಿಕ ವಿವಾಹ ನಡೆಯುವ ಸ್ಥಳಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡದೇ ಜವಾಬ್ದಾರಿಯಿಂದ ಮಾಡಿದರೆ ಮಾತ್ರ ಬಾಲ್ಯ ವಿವಾಹ ಸೇರಿದಂತೆ ಇತರೆ ಹಲವಾರು ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಬಹುದುʼ ಎಂದು ಹೇಳಿದರು.

ʼಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಸರಕಾರದಿಂದ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ, ಆಗಾಗ ಸಭೆ ನಡೆಸಿ ಮಾಹಿತಿ ಪಡೆಯಬೇಕುʼ ಎಂದು ತಹಶಿಲ್ದಾರರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 49 ಬಾಲ ಗರ್ಭಿಣಿ ಪ್ರಕರಣ :

ʼಹೋಟೆಲ್, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಲ್ಲಿ ಬಾಲ ಕಾರ್ಮಿಕ ಮಕ್ಕಳು ಕಂಡು ಬಂದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು. ಬಾಲಕರನ್ನು ಯಾರೂ ದುಡಿಮೆಗೆ ಹಚ್ಚಬಾರದು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ದಾಖಲಾದ 49 ಬಾಲ ಗರ್ಭಿಣಿ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಇಂತಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಪ್ರೌಢ ಶಾಲೆ ಮತ್ತು ಪಿಯುಸಿ ತರಗತಿಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ಸಂಗ್ರಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಹಾಕುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಾಂತ್ವನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಭೇಟಿ ಮಾಡಿಸಿ ಮತ್ತು ಕ್ರೀಡಾ ಇಲಾಖೆಯಿಂದ ಆ ಮಕ್ಕಳಿಗೆ ಕ್ರೀಡಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಶುದ್ಧ ನೀರು ಕುಡಿಯಲು ಆರ್‌ಒ ಪ್ಲಾಂಟ್ ಇಲ್ಲ ಎಂಬ ದೂರಿದೆ, ಅದನ್ನು ಸರಿಪಡಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ʼಮಕ್ಕಳ ಹಕ್ಕುಗಳು ಹಾಗೂ ಅರಿವಿನ ಕುರಿತು ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕು. ಈ ಕಾರ್ಯಕ್ರಮಗಳು ಬೀದರ ನಗರದಲ್ಲಿ ಅಷ್ಟೇ ಅಲ್ಲದೇ ತಾಲೂಕಿನಲ್ಲಿ ಸಹ ತಾಲೂಕು ಮಟ್ಟದ ಅಧಿಕಾರಿಗಳು ಆಯೋಜಿಸಬೇಕುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಯನಾಡ್ ಭೂಕುಸಿತ | ಮೃತರ ಸಂಖ್ಯೆ 84ಕ್ಕೆ ಏರಿಕೆ; ಕೇರಳದಲ್ಲಿ ಭಾರೀ ಮಳೆ

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ, ಬೀದರ ನಗರಸಭೆ ಆಯುಕ್ತ ಶಿವರಾಜ ರಾಠೋಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗೌರಿಶಂಕರ ಪರತಾಪೂರ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರಾದ ರಜಿಯಾ ಬಳಬಟ್ಟಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...