ಭದ್ರಾವತಿ | ಅಡಿಕೆ ಕಳ್ಳನ ಬಂಧನ; ಲಕ್ಷಾಂತರ ಮೌಲ್ಯದ ಅಡಿಕೆ ವಶಕ್ಕೆ

Date:

ಮನೆ ಮುಂದೆ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಅಡಿಕೆ ಚೀಲಗಳನ್ನು ಕದ್ದು ತಲೆಮರೆಸಿಕೊಂಡಿದ್ದ ಅಡಿಕೆ ಕಳ್ಳನನ್ನು ಮಾಲು ಸಮೇತ ಬಂಧಿಸುವಲ್ಲಿ ಭದ್ರಾವತಿಯ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಆಯನೂರಿನ ಕೋಹಳ್ಳಿ ನಿವಾಸಿ ಸೈಯದ್ ನವೀದ್‌ (29)‌ ಬಂಧಿತ ಆರೋಪಿ.

- Advertisement -

ಭದ್ರಾವತಿಯ ಅರಹತೊಳಲು ಗ್ರಾಮದ ಹರ್ಷ ಎನ್ನುವವರು ತಮ್ಮ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಜನವರಿ 26ರಂದು ಯಾರೋ ಕದ್ದಿದ್ದಾರೆ ಎಂದು ಹೊಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕರಣದ ಬೆನ್ನಟ್ಟಿದ ಎಸ್ಪಿ ಮಿಥುನ್ ಕುಮಾರ್ ಜಿ ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಎಸ್ ಭೂಮರಡ್ಡಿ, ಎ. ಜಿ ಕಾರಿಯಪ್ಪ, ಡಿವೈಎಸ್ಪಿ ನಾಗರಾಜ್ ಕೆ ಆರ್ ಅವರನ್ನೊಳಗೊಂಡ ತನಿಖಾ ತಂಡವು, ಸೈಯದ್ ನವೀದ್‌ ಎಂಬ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಫೆ.10 ರಂದು ಪುನಃ ಪೊಲೀಸ್ ವಶಕ್ಕೆ ಪಡೆದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದಾಖಲಾಗಿದ್ದ ಒಟ್ಟು ನಾಲ್ಕು ಅಡಿಕೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಅಂದಾಜು 5,00,000/- ರೂಗಳ 10 ಕ್ವಿಂಟಾಲ್ ಒಣ ಅಡಿಕೆ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಅಂದಾಜು ಸುಮಾರು 4,00,000/- ರೂಗಳ ಅಮೇಜ್ ಹೋಂಡಾ ಕಾರ್ ಸೇರಿ ಒಟ್ಟು 9,00,000/- ರೂಗಳ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕ ಪುತ್ರನಿಂದ ನಿಂದನೆ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...