ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅರುಣ್ ಕುಮಾರ್ ಮತ್ತು ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಭದ್ರಾವತಿ | ಕೊಲೆ ಆರೋಪಿ ಬಂಧನ