ಭದ್ರಾವತಿ | ಭೂಗರ್ಭ ಜಲ ಸಂರಕ್ಷಣೆ ಇಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ: ಪರಿಸರವಾದಿ ಶಿವರಾಂ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗೌಡರ ಹಳ್ಳಿಯಲ್ಲಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ದಶಮಾನೋತ್ಸವದ ಪ್ರಯುಕ್ತ ‘ಜಲಭಾಗ್ಯ’ ಯೋಜನೆಯ ಅಡಿಯಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿಯನ್ನು ನಿರ್ಮಿಸಿ ಕೊಡಲಾಯಿತು.

- Advertisement -

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ನೂರುಲ್ ಅಮೀನ್ ಅವರು ನೂತನ ಕೊಳವೆ ಬಾವಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಜಲ ಜೀವಾಮೃತ, ಅದನ್ನು ಸರಿಯಾಗಿ ಬಳಸಿದರೆ ಪುಣ್ಯವಿದೆ ಪೋಲು ಮಾಡುವುದು ಪಾಪ ಕಾರ್ಯವಾಗಿದೆ. ದಾನಗಳಲ್ಲಿ ಜಲದಾನಕ್ಕೂ ಪ್ರಮುಖ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಭಾರತ್ ಸೋಷಿಯಲ್ ಮತ್ತು ವೆಲ್ಫೇರ್ ಟ್ರಸ್ಟ್ ದಶಮಾನೋತ್ಸವದ ಸಂಭ್ರಮದಲ್ಲಿ ಮಹತ್ವಾಕಾಂಕ್ಷೆಯ ಜಲ ಭಾಗ್ಯ ಯೋಜನೆ ಹಮ್ಮಿಕೊಂಡಿದೆ. ಅದರ ಭಾಗವಾಗಿ ಗೌಡರ ಹಳ್ಳಿಯಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿಯನ್ನು ನಿರ್ಮಿಸಿ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ನೀರಿನ ಇಂಗುವಿಕೆಯ ಬಗ್ಗೆ ಜನಜಾಗೃತಿ ಹಮ್ಮಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...
bswt 3

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಖ್ಯಾತ ಪರಿಸರವಾದಿ, ರಂಗಕರ್ಮಿ ಹಾಗೂ ಚಿತ್ರ ನಿರ್ದೇಶಕರಾದ ಪರಸರ ಶಿವರಾಂ ಅವರು ಮಾತನಾಡುತ್ತಾ, “ನೀರು ಪ್ರಕೃತಿಯ ಅಮೂಲ್ಯ ಕೊಡುಗೆ. ಇಂದು ನಾವು ಕೊಳವೆ ಬಾವಿಯನ್ನು ಉದ್ಘಾಟಿಸುತ್ತಿದ್ದೇವೆ. ಬಹಳ ಸಂತೋಷದ ವಿಚಾರ. ನೀರನ್ನು ಮಿತವಾಗಿ ಬಳಸುವ ಮೂಲಕ ಭೂಮಿಯ ಭವಿಷ್ಯವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಭೂಗರ್ಭ ಜಲ ಸಂರಕ್ಷಣೆ ಇಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ. ಈ ಕೊಳವೆ ಬಾವಿಯ ನೀರು ನಮ್ಮ ಅಗತ್ಯಕ್ಕೆ ಮಾತ್ರವಲ್ಲ, ಜವಾಬ್ದಾರಿಯ ಬಳಕೆಯ ಸಂಕೇತವಾಗಬೇಕು. ಪ್ರಕೃತಿಯನ್ನು ಶೋಷಿಸುವುದಲ್ಲ, ಸಂರಕ್ಷಿಸುವುದೇ ನಿಜವಾದ ಪ್ರಗತಿ ಎಂದು ತಿಳಿಸಿದರು.

“ನೀರನ್ನು ಉಳಿಸಿದರೆ ನಾಳೆಯನ್ನು ಉಳಿಸಿದಂತಾಗುತ್ತದೆ. ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್‌ನ ಈ ಸೇವೆ ಶ್ಲಾಘನೀಯ. ನೀರು ಸಂರಕ್ಷಣೆ ಮತ್ತು ಪೂರೈಕೆಗಾಗಿ ಅವರ ಮುಂದಿನ ಯೋಜನೆಗಳು ಯಶಸ್ಸು ಕಾಣಲಿ ಎಂದು ಹಾರೈಸುತ್ತೇನೆ.” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ವರ್ಷವೇ ಜಿಬಿಎ ಪಾಲಿಕೆಗಳು ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನ ವಿಭಾಗ ಮುಖ್ಯಸ್ಥರಾಗಿರುವ ಝುಲ್ಫಿಕರ್ ಅಲಿ, ಖದೀಜ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಉಪಾಧ್ಯಕ್ಷರಾದ ನಿಯಾಝುರ್ಹ್ಮಾನ್ ಪೆರ್ಲ ಉಪಸ್ಥಿತರಿದ್ದರು. ಮುನೀರ್ ಪದ್ರೆಂಗಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2026 01 01 at 5.31.45 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...