ಭದ್ರಾವತಿ | ಫೆ.21 ರಂದು ಬೃಹತ್ ಪ್ರತಿಭಟನೆ: ರೈತ ಮುಖಂಡ ಬಸವರಾಜಪ್ಪ ಕರೆ

Date:

ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ನಾಳೆ (ಫೆ.21) ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಹೆಚ್‌ ಆರ್ ಬಸವರಾಜಪ್ಪ ತಿಳಿಸಿದರು.

- Advertisement -

ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಭದ್ರಾವತಿ ತಾಲೂಕು ಹಾಗೂ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಾಗುವಳಿ ರೈತರು ಮತ್ತು ಶರಾವತಿ ಮುಳಗಡೆಯಿಂದ ಸ್ಥಳಾಂತರಗೊಂಡ ಸಂತ್ರಸ್ಥ ರೈತರಿಗೆ ಈ ಹಿಂದೆ ಬಗರ್ ಹುಕುಂ ಸಮಿತಿ ಸಾಗುವಳಿ ಮುಂಜೂರಾತಿ ಪತ್ರ ಕೊಟ್ಟಿತ್ತು. ಹಾಗಾಗಿ ಈ ಪ್ರದೇಶದ ರೈತರೆಲ್ಲರೂ ಆ ಭೂಮಿಯಲ್ಲಿ ಕಳೆದ 60-70 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಕಂದಾಯ ಇಲಾಖೆಯಿಂದ ಪಹಣಿ ಹಾಗೂ ಮುಟೇಷನ್ ದಾಖಲಾತಿಗಳನ್ನು ಕೊಡುವಾಗ ಬಗರ್ ಹುಕುಂ ಸಮಿತಿಯಲ್ಲಿ ಅರಣ್ಯ ಅಧಿಕಾರಿಗಳ ಒಪ್ಪಿಗೆ ಮೇರೆಗೆ ದಾಖಲಾತಿಗಳನ್ನು ನೀಡಿರುತ್ತಾರೆ. ಆದರೆ, ಹಲವು ವರ್ಷಗಳ ನಂತರ ಈಗ ಆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಇಲಾಖೆಯ ಅಧಿಕಾರಿಗಳು ಪಹಣಿಯಲ್ಲಿ ತಿದ್ದುಪಡಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

“ಜೆಸಿಬಿ ಯಂತ್ರಗಳ ಮೂಲಕ ಸಾಗುವಳಿದಾರರ ಜಮೀನುಗಳಲ್ಲಿರುವ ಅಡಿಕೆ ಮರಗಳನ್ನು ಕಿತ್ತೆಸೆದು ದೌರ್ಜನ್ಯ ಎಸಗುತ್ತಿದ್ದಾರೆ. ರೈತರ ಜಮೀನಿನಲ್ಲಿ ಕಾಲುವೆಗಳನ್ನು ನಿರ್ಮಿಸಿ ರೈತರನ್ನು ಒಕ್ಕಲೆಬ್ಬಿಸುವಾಗ ರೈತರು ಅಧಿಕಾರಿಗಳನ್ನು ಪ್ರಶ್ನಿಸಲು ಹೋದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರೀಗಂಧದಮರ, ಬೀಟೆ ಮತ್ತು ಸಾಗುವಾನಿ ಇತರೆ ಬೆಲೆ ಬಾಳುವ ಮರಗಳನ್ನು ಕಡಿದು ಕಾಡನ್ನು ನಾಶ ಮಾಡಿದ್ದೀರಿ ಎಂದು ರೈತರ ಮೇಲೆಯೇ ಸುಳ್ಳು ಮೊಕದ್ದಮೆ ಹೂಡುವುದಾಗಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ. ಕಂದಾಯ ಇಲಾಖೆಯವರೂ ಸಹ ಇದೇ ರೀತಿ ಸೂಚನಾ ಪತ್ರಗಳನ್ನು ಕೊಟ್ಟಿರುವುದು ದೌರ್ಜನ್ಯವಲ್ಲದೆ ಮತ್ತೇನು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಟದ; ವಿಡಿಯೊ ವೈರಲ್

ಈ ರೀತಿ ದೌರ್ಜನ್ಯ ಎಸಗುತ್ತಿರುವ ರೈತ ವಿರೋಧಿ ನೀತಿಯನ್ನು ಖಂಡಿಸಿ ರೈತರ ಬೃಹತ್ ಪ್ರತಿಭಟನೆಯನ್ನು ಫೆಬ್ರವರಿ 21ರ ಬೆಳಗ್ಗೆ 10 ಗಂಟೆಗೆ ಭದ್ರಾವತಿ ರಂಗಪ್ಪ ಸರ್ಕಲ್‌ನಿಂದ ತಹಿಶೀಲ್ದಾರರ ಕಚೇರಿ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಗೆ ಬಗ‌ರ್ ಹುಕುಂ ಸಾಗುವಳಿ ರೈತರು, ಶರಾವತಿ ಮುಳುಗಡೆ ಸಂತ್ರಸ್ಥರು, ಸ್ಥಳಾತರಗೊಂಡ ರೈತರು, ಅರಣ್ಯ ಹಕ್ಕು ಸಮಿತಿ ರೈತರು, ರಾಜ್ಯ ರೈತ ಸಂಘಟನೆಗಳು ಹಾಗೂ ಹಸಿರು ಸೇನೆ ರೈತ ಮುಖಂಡರುಗಳು, ಎಲ್ಲಾ ಸಹಕಾರಿ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...