ಭದ್ರಾವತಿ ತಾಲೂಕಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ ) ಭದ್ರಾವತಿ. ಭದ್ರಾವತಿ ತಾಲೋಕ್ ಬಸವೇಶ್ವರ ಸಭಾ ಭವನದಲ್ಲಿ SSLC ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಲಕ್ಷ್ಮೀಹೆಬಾಳ್ಕರ್ ಕಾರ್ಯಕ್ರಮದ ಉದ್ಘಾಟನೆ ಮಾಡಿ ಕಾರ್ಯಕ್ರಮ ನೆರೆವೇರಿಸಿದರು.
ಈ ಕಾರ್ಯಕ್ರಮದಲ್ಲಿ ಭದ್ರಾವತಿಯ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರಿಂದ ಪ್ರತಿಭಾ ಪುರಸ್ಕಾರದಲ್ಲಿ ವಿದ್ಯಾರ್ಥಿನಿ ಚೈತ್ರರವರಿಗೆ ಹಾಗೂ SSLC ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಭಿನಂದಿಸಿದರು.

ಈ ಕಾರ್ಯಕ್ರಮದಲ್ಲಿ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಶಂಕರ್ ಬಿದರಿ, ಭದ್ರಾವತಿ ಶಾಸಕ ಸಂಗಮೇಶ, ಮತ್ತು ಸಮಾಜದ ಪ್ರಮುಖರು ಉಪಸ್ಥಿತರಿದ್ದರು.