ರವಿ ಅಲಿಯಾಸ್ ಗುಂಡ ಎಂಬ ರೌಡಿಶೀಟರ್ ಮೇಲೆ ಭದ್ರಾವತಿಯ ಹೊಸಮನೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಪ್ರಕರಣವೊಂದರಲ್ಲಿ ರವಿಯನ್ನು ಬಂಧಿಸಲು ಮುಂದಾದಾಗ ಆರೋಪಿಯೇ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೊಸಮನೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ತಮ್ಮ ಸಿಬ್ಬಂದಿಯ ರಕ್ಷಣೆಗಾಗಿ ಅನಿವಾರ್ಯವಾಗಿ ಫೈರಿಂಗ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಫೆ.21 ರಂದು ಬೃಹತ್ ಪ್ರತಿಭಟನೆ: ರೈತ ಮುಖಂಡ ಬಸವರಾಜಪ್ಪ ಕರೆ
ದರ್ಶನ್ ಎಂಬ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾದಾಗ, ಪಿಎಸ್ಐ ಕೃಷ್ಣ ಅವರು ಶರಣಾಗತಿಗೆ ಎಚ್ಚರಿಕೆ ನೀಡಿದ್ದರು. ಇದನ್ನು ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ರವಿಯ ಕಾಲಿಕೆ ಪಿಎಸ್ಐ ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆ ದಾಖಲಿಸಿದರೆ, ಗಾಯಾಳು ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
