ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗಿರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
2025-2026 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ 211 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಕಳೆದ ವರ್ಷ 164 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ.
ಹೀಗಿರುವಾಗ ಇಲಾಖೆ ವತಿಯಿಂದ ಇನ್ನುಳಿದ 30 ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಲಭ್ಯವಾಗಿರುವುದಿಲ್ಲ. ಬಹುತೇಕ ಸರ್ಕಾರಿ ಶಾಲೆಗಳಿಗೆ, ಶಾಲೆ ಪ್ರಾರಂಭವಾಗಿ ಎರಡು ತಿಂಗಳು ಕಳೆದಿರುತ್ತೆ, ಹೀಗಿದ್ದರು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣತ್ಮಕ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಆಂಗ್ಲ ಮಧ್ಯಮ ಶಾಲೆಗಳನ್ನು ಪ್ರಾರಂಭ ಮಾಡಿರುವ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪಠ್ಯ ಪುಸ್ತಕ ಪೂರೈಸದೆ ವಿದ್ಯಾರ್ಥಿಗಳಿಗೆ ವಂಚಿಸಿರುತ್ತದೆ ಎಂಬ ಮಾಹಿತಿ ಕೇಳಿಬಂದಿದೆ.
ಇದು ಮಕ್ಕಳ ಶಿಕ್ಷಣ ಹಕ್ಕು ಉಲ್ಲಂಘನೆಯಾಗಿರುತ್ತದೆ.
ಸರ್ಕಾರಿ ಶಾಲೆಗಳೆಂದರೆ ಅವ್ಯವಸ್ಥೆಯ ಆಗರವೆಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾಗಿ ತಿಳಿದುಬಂದಿದೆ.
ಈ ಬಗ್ಗೆ ಭದ್ರಾವತಿ ಬಿಇಒ ಮತ್ತು ಡಿಡಿಪಿಐ ಜಾಣ ಮೌನಕ್ಕೆ ಶರಣಾಗಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.