ಉಡುಪಿ | ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ಯುವಕ ಮೃತ್ಯು

Date:

‘ರೀಲ್ಸ್’ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರೂ ಕೆಲವು ಯುವಕರು ಅದ್ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅತಿಯಾದ ಮಳೆ, ತುಂಬಿ ತುಳುಕುವ ಜಲಪಾತ ನೋಡಲು ಹೋದ ಯುವಕನೋರ್ವ ‘ರೀಲ್ಸ್’ ಮಾಡಲು ಹೋಗಿ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ.

ಜಲಪಾತದ ಬಳಿಯಲ್ಲಿನ ಬಂಡೆಕಲ್ಲಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ, ಜಲಪಾತಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ.

ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...