ರಾಯಚೂರು | ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ : ಸಾಹಿತಿ ಜಿ ಸಿದ್ದರಾಮಯ್ಯ

Date:

Advertisements


ಸರ್ವರನ್ನು ಸಮಾನವಾಗಿ ಕಾಣುವ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದ್ದರೂ ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿ ಕೃತ್ಯಗಳು ನಡೆಯುತ್ತಿರುವುದು ವಿಷಾದನೀಯ. ಸದ್ಯ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.

ರಾಯಚೂರು ಜಿಲ್ಲಾ ಘಟಕ ಕನ್ನಡ ಸಾಹಿತ್ಯ ಪರಿಷತ್ತು, ಡಿ.ದೇವರಾಜ ಅರಸು ವಿಚಾರ ವೇದಿಕೆ ವತಿಯಿಂದ ನಗರದದಲ್ಲಿ ಆಯೋಜಿಸಿದ್ದ ಸಾಹಿತಿ ಭಗತರಾಜ ನಿಜಾಮಾಕಾರಿ ಅವರ ‘ಭಗತನ ಪದಗಳು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಮಗ್ರ ಇತಿಹಾಸವನ್ನು ತಿರುಚಿ ಇಂದಿನ ಯುವ ಪೀಳಿಗಿಗೆ ವಾಟ್ಸಪ್‌ ಯುನಿರ್ವಸಿಟಿ ಮೂಲಕ ತಪ್ಪು ಮಾಹಿತಿ ನೀಡಿ, ವಿಷ ಬೀಜ ಬಿತ್ತುವ ಕೆಲಸಗಳು ಇಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಸಮಾಜದಲ್ಲಿ ನೈತಿಕತೆ ಕುಸಿಯುತ್ತಿದೆ. ಇತಿಹಾಸ ತಿರುಚಿ ದ್ವೇಷ ಹರಡಿಸುವುದು ಸಲ್ಲದು. ಇದಕ್ಕೆ ಕೊನೆಗಾಣಿಸುವುದು ಅವಶ್ಯ ಎಂದರು.

Advertisements

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಡಾ. ಬಸವಪ್ರಭು ಪಾಟೀಲ ಬೆಟ್ಟದೂರು ಮಾತನಾಡಿ, ಭಗತರಾಜ ನಿಜಾಮಕಾರಿ ಬಂಡಾಯ ಸಾಹಿತ್ಯ ಹುಟ್ಟುಹಾಕಿದವರಲ್ಲಿ ಇವರೂ ಒಬ್ಬರು. ಕಷ್ಟಕರ ಜೀವನದಲ್ಲಿಯೂ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬೋಳಬಂಡೆಪ್ಪ, ಜಂಬಣ್ಣ ಅಮರಚಿಂತ, ಶಾಂತರಸ ಸಮಕಾಲೀನರು. ಜೊತೆಗೆ ಶಾಂತರಸರ ಪ್ರೀತಿಯ ಶಿಷ್ಯರಾಗಿದ್ದಾರೆ. ಭಗತನ ಪದಗಳು ಕೃತಿಯಲ್ಲಿ 128 ಗದ್ಯಗಳಿದ್ದು, ಪ್ರಸ್ತುತ ವಿದ್ಯಮಾನಗಳನ್ನೂ ಕೂಡ ಒಳಗೊಂಡಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ‘ಒತ್ತುವರಿ’ ಆರೋಪ: ದಾಖಲೆಗಳಿದ್ದರೂ ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿದ ಅರಣ್ಯಾಧಿಕಾರಿ!

ಬೆಂಗಳೂರಿನ ಸಾಹಿತಿ ಹಾಗೂ ಚಿತ್ರ ಕಲಾವಿದ ಎಂ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರ್, ಬಷೀರ್ ಅಹ್ಮದ್ ಹೊಸಮನಿ, ಸಾಹಿತಿಗಳಾದ ಬಾಬು ಭಂಡಾರಿಗಲ್ , ಅಯ್ಯಪ್ಪಯ್ಯ ಹುಡಾ, ಆಂಜನೇಯ ಜಾಲಿಬೆಂಚಿ, ನರಸಿಂಹಲು ವಡವಾಟಿ, ನರಸಪ್ಪ, ರುದ್ರಯ್ಯ, ಬಿ.ವಿಜಯ ರಾಜೇಂದ್ರ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X