ಬೀದರ್ | ಭಾಗ್ಯಶ್ರೀ ಕೊಲೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ ಖಂಡಿಸಿ ದಲಿತ ಯುನಿಟಿ ಮೂವ್‌ಮೆಂಟ್ ಪ್ರತಿಭಟನೆ ನಡೆಸಿತು.

- Advertisement -

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮುಖಾಂತರ ತೆರಳಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪ್ರತಿಭಟನೆ ನೇತೃತ್ವ ವಹಿಸಿದ ದಲಿತ ಯುನಿಟಿ ಮೂವ್‌ಮೆಂಟ್ ಸಂಸ್ಥಾಪಕ ಅಧ್ಯಕ್ಷ ವಿನೋದ್ ರತ್ನಾಕರ್ ಮಾತನಾಡಿ, ‘ಶರಣರ ನೆಲದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಕೃತ್ಯ ಇಡೀ ಮನುಕುಲವೇ ತಲೆತಗ್ಗಿಸುವಂತೆ ಮಾಡಿದೆ. ದೇಶ ಸ್ವಾತಂತ್ರ್ಯಗೊಂಡು 78 ವರ್ಷ ಕಳೆದರೂ ಮಹಿಳೆಯರಿಗೆ ಇನ್ನೂ ರಕ್ಷಣೆ ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೊಲೆ , ಅತ್ಯಾಚಾರದಂತಹ ಘಟನೆಗಳು ನಡೆದಾಗ ದಾಖಲಾಗುವ ಪ್ರಕರಣಗಳ್ನು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಕಾನೂನು ಶಿಕ್ಷೆ ನೀಡಬೇಕು. ಆದರೆ ಜನರಿಗೆ ಪ್ರಕರಣದ ಕುರಿತು ಯಾವುದೇ ಮಾಹಿತಿ ನೀಡದೇ ತನಿಖೆ ನಡೆಸಲಾಗುತ್ತಿದೆ. ಹೀಗಾಗಿ ಜನರಿಗೆ ಕಾನೂನಿನ ಅರಿವು ಮೂಡಿಸಬೇಕು’ ಎಂದು ಆಗ್ರಹಿಸಿದರು.

‘ಯುವತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳ ಬಂಧನವಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಯುನಿಟಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ್ ರಾವಣ, ರಾಜ್ಯ ಸಂಘಟನಾ ಸಂಚಾಲಕ ಗೌತಮ್ ದೊಡ್ಡಿ ಸೇರಿದಂತೆ ಪ್ರಮುಖರಾದ ಆನಂದ್ ಮಶಿಮಾಡೆ, ವಿನೀತ್ ಗಿರಿ, ಜಗದೀಶ್ವರ್ ಬಿರಾದರ್, ಓಂಪ್ರಕಾಶ್ ರೊಟ್ಟೆ, ಮಹೇಶ್ ಗೋರನಾಳಕರ್, ಅಂಬರೀಶ್ ಕುದುರೆ, ಸಂದೀಪ್ ಕಾಂಟೆ, ಗೌತಮ್ ಪ್ರಸಾದ್, ರಾಹುಲ್ ಡಾಂಗೆ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...