ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನಿಟ್ಟೂರು (ಬಿ) ಸಹಯೋಗದಲ್ಲಿ ಮಂಗಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ನಿಟ್ಟೂರ(ಬಿ) ಗ್ರಾಮ ಪಂಚಾಯತಿ ಪಿಡಿಒ ರಾಜಕುಮಾರ್ ತಂಬಾಕೆ, ʼಮಾನಸಿಕ ಹಾಗೂ ದೈಹಿಕ ಆರೋಗ್ಯ ನಾಶಗೊಳಿಸುವ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿರಬೇಕು. ಎಲ್ಲರೂ ವ್ಯಸನದಿಂದ ಮುಕ್ತರಾಗುವಂತೆ ಅರಿವು ಮೂಡಿಸಿದರೆ ಮಾತ್ರ ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಯಾಗುತ್ತದೆʼ ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಚಾರ್ಯ ಬಾಬುರಾವ್ ಮಾಳಗೆ ಅವರು ಮಾತನಾಡಿ, ʼಯುವಜನರು ಮದ್ಯವ್ಯಸನ, ಗುಟುಕಾ, ಬೀಡಿ, ಸಿಗರೇಟ್, ಗಾಂಜಾ ಸೇವನೆ ಮೊದಲಾದವುಗಳು ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದರಿಂದ ನಮ್ಮ ಕುಟುಂಬಸ್ಥರಿಗೂ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳು ವ್ಯಸನದಿಂದ ಮುಕ್ತರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕುʼ ಎಂದು ಕರೆ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಷಣ್ಮುಖ, ಸದಸ್ಯರಾದ ಮಲ್ಲಿಕಾರ್ಜುನ ಕರಂಜಿ, ಬಾಲಾಜಿ ಪಾಟೀಲ್, ನಿಟ್ಟೂರ್ ಪೋಲಿಸ್ ಹೊರವಲಯ ಠಾಣೆಯ ಎಎಸ್ಐ ಲಕ್ಷ್ಮಣ್ ರೆಡ್ಡಿ, ಪಂಚಾಯತ್ ಒಕ್ಕೂಟದ ಅಧ್ಯಕ್ಷೆ ಚಂದ್ರಕಲಾ ಹಣಮಂತರಾವ್, ಒಕ್ಕೂಟದ ಎಂಬಿಕೆ ಮಂಗಲಾ ಮಾಳಗೆ, ಶಾಲೆಯ ಮುಖ್ಯಗುರು ಪುಂಡಲಿಕರಾವ್ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದನ್ನೂ ಓದಿ : ಬೀದರ್ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ