ಭಾಲ್ಕಿ | ನಾಳೆ ಬಾಳೂರನಲ್ಲಿ ಭಗವಾನ್ ಬುದ್ಧ ಪ್ರತಿಮೆ ಅನಾವರಣ

Date:

ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ ಪ್ರತಿಮೆ ಅನಾವರಣ ಸಮಾರಂಭವನ್ನು ನಾಳೆ ಶಾಲೆಯ ಆವರಣದಲ್ಲಿ ನಡೆಯಲಿದೆ.

- Advertisement -

ಅಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದಲ್ಲಿ ಭಗವಾನ್ ಗೌತಮ ಬುದ್ಧರ ಪ್ರತಿಮೆಯೊಂದಿಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಕಾಶಿನಾತ ಚೆಲ್ವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆಣದೂರ ಬುದ್ಧ ವಿಹಾರದ ಭಂತೆ ವರಜ್ಯೋತಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ. ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನೆರವೇರಿಸಲಿದ್ದಾರೆ.

ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ್ ಸಂಸದರಾದ ಸಾಗರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬೀಳಿಮಲೆ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ದಶರಥ ದೊಡ್ಡಿ, ಬಸವರಾಜ ಬುಳ್ಳಾ, ಬಕ್ಕಪ್ಪ ಕೋಟೆ, ಶಿವರಾಜ ಹಾಸನಕರ್ ಹಾಗೂ ನ್ಯಾಯವಾದಿ ಬಾಪುರಾವ ದೇಶಮುಖ, ಬಾಳೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀಬಾಯಿ ಚೆಲ್ವಾ, ಮಾಜಿ ಉಪಾಧ್ಯಕ್ಷ ಸಿದ್ರಾಮ ದೇಶಮುಖ ಸೇರಿದಂತೆ ವಿವಿಧ ಸಮಾಜದ ಗಣ್ಯರು, ಮುಖಂಡರು, ಅಧಿಕಾರಿಗಳು, ಸಾಮಾಜಿಕ ಚಿಂತಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ವಿಶೇಷ ಸನ್ಮಾನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...